ಲಖನೌ: ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿದ್ದ ಗಡಿ ಭದ್ರತಾ ಪಡೆಯ ಮಾಜಿ ತೇಜ್ ಬಹದ್ದೂರ್ ಯಾದವ್ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂಂದ್ರ ಮೋದಿ ವಿರುದ್ಧ ಕಣಕ್ಕಿಳಿದಿದ್ದರು. ಆದರೆ ಈಗ ಅವರ ನಾಮಪತ್ರ ತಿರಸ್ಕಾರವಾಗಿದೆ.
ಅಮಾನತುಗೊಂಡಿರುವ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಗೆ ಮಂಗಳವಾರ ಚುನಾವಣಾ ಆಯೋಗ ನೊಟೀಸ್ ನೀಡಿತ್ತು. ಸೇನೆ ಬಗ್ಗೆ ವಾಟ್ಸ್ ಅಪ್ ಸೆಲ್ಫಿ ವಿಡಿಯೋ ಕಳುಹಿಸಿ ಸುದ್ದಿಯಾಗಿದ್ದ ತೇಜ್ ಬಹದ್ದೂರ್ ಯಾದವ್ ಎರಡನೇ ಬಾರಿ ವಿಡಿಯೋ ಹಾಕಿದಾಗ ಸೇನೆಯಿಂದ ವಜಾಗೊಂಡಿದ್ದರು.
ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸುವ ಮೊದಲೇ ತೇಜ್ ಬಹದ್ದೂರ್ ಯಾದವ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆ ನಾಮಪತ್ರದಲ್ಲಿ ಸೇನೆಯಿಂದ ವಜಾಗೊಂಡ ಸಂಗತಿಯನ್ನು ಉಲ್ಲೇಖಿಸಿದ್ದರು. ಎರಡನೇ ನಾಮಪತ್ರದಲ್ಲಿ ಆ ವಿಚಾರವಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಹಾಗೂ ಬಿಎಸ್‌ಎಫ್ ನಿಂದ ಎನ್‌ಒಸಿ ತರುವಂತೆ ಸೂಚನೆ ನೀಡಿತ್ತು. ಆದ್ರೆ ತೇಜ್ ಬಹದ್ದೂರ್ ಯಾದವ್ ನಿಗದಿತ ಸಮಯಕ್ಕೆ ನೊಟೀಸ್ ಗೆ ಉತ್ತರ ನೀಡದ ಕಾರಣ ನಾಮಪತ್ರ ತಿರಸ್ಕೃತಗೊಂಡಿದೆ ಎನ್ನಲಾಗಿದೆ..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…