ಬೆಂಗಳೂರು: ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್ಇಡಿ ಲೈಟ್ಗಳನ್ನು ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ರೀತಿಯ ಲೈಟ್ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂಥ ಲೈಟ್ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಉಲ್ಲಂಘಿಸಿದವರು ದಂಡ ಸೇರಿದಂತೆ ಇತರ ಕಾನೂನು ಕ್ರಮಗಳನ್ನು ಎದುರಿಸಬೇಕಾಗಲಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಸ್ತೆ ಅಪಘಾತಗಳು ಮತ್ತು ಅದರಿಂದಾಗುವ ಸಾವು-ನೋವುಗಳನ್ನು ತಪ್ಪಿಸಲು, ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಲೈಟ್ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಲೋಕ್ ಕುಮಾರ್ ‘ಎಎನ್ಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಾವು ವಾಹನಗಳಲ್ಲಿ ಎಲ್ಇಡಿ ಲೈಟ್ಗಳನ್ನು ನಿಷೇಧಿಸುವ ಬಗ್ಗೆ ಮಾತನಾಡುತ್ತಿಲ್ಲ. ಆದರೆ, ವಾಹನಗಳಲ್ಲಿ ಕಣ್ಣುಕುಕ್ಕುವಂಥ ಲೈಟ್ಗಳನ್ನು ಬಳಸುತ್ತಿದ್ದರೆ ಮತ್ತು ವಾಹನಗಳಲ್ಲಿ ಅಳವಡಿಸಿರುವ ಲೈಟ್ಗಳು ಇತರ ಚಾಲಕರಿಗೆ ತೊಂದರೆಯನ್ನು ಉಂಟು ಮಾಡುವಂತೆ ಇದ್ದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲು ನಾವು ಸೂಚಿಸುತ್ತಿದ್ದೇವೆ. ಎಲ್ಇಡಿ ಲೈಟ್ಗಳು ಇತರ ಚಾಲಕರಿಗೆ ಸಮಸ್ಯೆ ಉಂಟುಮಾಡುತ್ತವೆ. ಹೀಗಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ನಾವು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು ಅಪಘಾತಗಳಿಗೆ ಕಾರಣವಾಗುತ್ತದೆ ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.
ಆದೇಶದಲ್ಲೇನಿದೆ?
ವಾಹನಗಳಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಲೈಟ್ಗಳನ್ನು ಅಳವಡಿಸುವ ಕುರಿತು ಸಚಾರಿ ಪೊಲೀಸರಿಗೆ ಆದೇಶ ಹೊರಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಬದಿಯಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದೆ. ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡಂದಂತೆ ಹೆಡ್‌ಲೈಟ್‌ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪುಟದ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ಲೈಟ್ಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ ಅಂತಹ ವಾಹನ ಸವಾರದ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ಅಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ವಾಹನಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು ಎಂದೂ ಸೂಚನೆ ನೀಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…