Featured

ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಸೇನಾಪಡೆಯ ಅತ್ಯುನ್ನತ ಗೌರವ ನೀಡುವುದು ಬಹುತೇಕ ಖಚಿತ -Vishwanews24

ನವದೆಹಲಿ:  ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಸಾಹಸಕ್ಕಾಗಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ ಕೇಂದ್ರ ಸರ್ಕಾರ ವೀರ ಚಕ್ರ ಪದಕ ಗೌರವ ನೀಡುವುದು ಬಹುತೇಕ ಖಚಿತವಾಗಿದೆ.

ವರ್ಧಮಾನ್ ಅವರಿಗೆ ವೀರ್ ಚಕ್ರ ನೀಡಿ ಗೌರವಿಸುವ ಸಾಧ್ಯತೆ ಇದೆ. ಅದೇ ವೇಳೆ ಬಾಲಾಕೋಟ್‌ನಲ್ಲಿ  ಜೈಷ್- ಎ- ಮೊಹಮ್ಮದ್ ಉಗ್ರ  ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮಿರಾಜ್ -2000 ಫೈಟರ್ ವಿಮಾನದ 5 ಪೈಲಟ್‌ಗಳಿಗೂ  ವಾಯುಸೇನೆಯ ಪದಕ ನೀಡಿ ಗೌರವಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫೆಬ್ರುವರಿ 27ರಂದು ಕಾಶ್ಮೀರದ ಗಡಿನಿಯಂತ್ರಣ ರೇಖೆಯಲ್ಲಿ ಪಾಕ್ ವಾಯುಪಡೆಯ ಯುದ್ಧವಿಮಾನಗಳೊಡನೆ ನಡೆದಿದ್ದ ಹೋರಾಟದಲ್ಲಿ ಅಭಿನಂದನ್ ತಮ್ಮ ಮಿಗ್–21 ಯುದ್ಧವಿಮಾನದಿಂದ ಪಾಕಿಸ್ತಾನದ ಎಫ್–16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಮಿಗ್–21 ಯುದ್ಧವಿಮಾನದಿಂದ ಪಾಕಿಸ್ತಾನದ ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಘಟನೆ ಇದೇ ಮೊದಲು ಎಂದು ತಜ್ಞರು  ಅಭಿಪ್ರಾಯಪಟ್ಟಿದ್ದಾರೆ.

2019 ರ ಫೆಬ್ರವರಿ 27 ರಂದು ಪಾಕಿಸ್ತಾನದ ಯುದ್ಧ ವಿಮಾನಗಳು ಭಾರತದ ವಾಯುಗಡಿ ಉಲ್ಲಂಘಿಸಿ ಪ್ರವೇಶಿಸಲು ಯತ್ನಿಸಿದ್ದವು. ಈ ಸಂದರ್ಭದಲ್ಲಿ ತಮ್ಮ ಮಿಗ್ 21 ಬೈಸನ್ ಯುದ್ದವಿಮಾನದಲ್ಲಿ ಅವುಗಳನ್ನು ಬೆನ್ನಟ್ಟಿಕೊಂಡು ಹೋಗಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಎಫ್ 16 ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿದ್ದರು. ಬಳಿಕ ಅವರು ವಿಮಾನದಿಂದ ಹೊರಜಿಗಿದಿದ್ದರು. ಆದರೆ, ಅವರು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಇಳಿದಿದ್ದರಿಂದ ಪಾಕ್ ಸೇನಾ ಪಡೆ ಅವರನ್ನು ಬಂಧಿಸಿತ್ತು. ಪಾಕ್ ಮೇಲೆ ಜಾಗತಿಕವಾಗಿ ಒತ್ತಡ ಹೇರಿದ್ದ ಭಾರತ, ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

1 day ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago