Featured

ವಿಕಲಚೇತನರಿಗೆ `ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ  – Vishwanews24

ವಿಕಲಚೇತನರಿಗೆ `ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 ಲಕ್ಷ ರೂ. ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ 50% ಸಬ್ಸಿಡಿಯನ್ನು ಇಲಾಖೆಯು ಭರಿಸಲಿದ್ದು, ಈ ಹಿಂದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ವಿಕಲಚೇತರು ಹಾಗೂ ಅರ್ಹ ವಿಕಲಚೇತನರು ಕೆಳಕಂಡ ಅಗತ್ಯ ದಾಖಲಾತಿಗಳೊಂದಿಗೆ 2023ರ ಫೆಬ್ರವರಿ 04 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಜಿಲ್ಲೆಯಲ್ಲಿ ಕೆಲವು ವಿಕಲಚೇತನರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವುದು ಕಂಡು ಬಂದಿರುತ್ತದೆ. ಆದರೆ ಆನ್ಲೈನ್ ಮೂಲಕ ಅರ್ಜಿಗಳನ್ನು ವಿಲೇ ಮಾಡಲು ತಾಂತ್ರಿಕ ಸಮಸ್ಯೆ ಎದುರಾಗುತ್ತಿರುವ ಹಾಗೂ ಆರ್ಥಿಕ ವರ್ಷ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಆನ್ಲೈನ್ ಮೂಲಕ ವಿಲೇ ಮಾಡಲು ಸಮಯದ ಅಭಾವವಿರುವುದರಿಂದ ಪ್ರಸಕ್ತ ಸಾಲಿನಲ್ಲಿ ಭೌತಿಕವಾಗಿ (ಆಫ್ಲೈನ್) ವಿಲೇ ಮಾಡಲಾಗುವುದು.

ಫಲಾನುಭವಿಗಳಿಗೆ ಇರಬೇಕಾದ ಅರ್ಹತೆಗಳು : ಫಲಾನುಭವಿಗೆ ಶೇ.40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇರತಕ್ಕದ್ದು, ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.11,500/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.24,000/- ಗಳನ್ನು ಮೀರಿರಬಾರದು, ಅರ್ಜಿದಾರರು ಕನಿಷ್ಟ ಕೆಳದ 10 ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವೀರಬೇಕು, ಅರ್ಜಿದಾರರು ಬ್ಯಾಂಕ್ಗಳಿಗೆ ಹಾಗೂ ಸರ್ಕಾರಕ್ಕೆ ಈ ಹಿಂದೆ ಸುಸ್ತಿದಾರರಾಗಿರಬಾರದು. (ಬ್ಯಾಂಕ್ ಗಳಿಂದ ಬೇಬಾಕಿ ಪ್ರಮಾಣ ಪತ್ರ ಲಗತ್ತಿಸಬೇಕು.), ಫಲಾನುಭವಿಗೆ ಕನಿಷ್ಠ 18 ರಿಂದ 55 ವರ್ಷದೊಳಗಿರಬೇಕು, ಅಂಗವಿಕಲತೆ ಹೊಂದಿರುವ ಬಗ್ಗೆ ಸಂಬಂಧ ಪಟ್ಟ ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ಅಂಗವಿಕಲರ ಗುರುತಿನ ಚೀಟಿ/ಯು.ಡಿ.ಐ.ಡಿ. ಕಾರ್ಡ್ ಜೆರಾಕ್ಸ್ ಪ್ರತಿ, ಈ ಹಿಂದೆ ಆಧಾರ/ಎನ್.ಹೆಚ್.ಎಫ್.ಡಿ.ಸಿ./ಹಿಂದುಳಿದ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಇತರೆ ಯಾವುದೇ ಸರ್ಕಾರ/ಸಂಘ-ಸಂಸ್ಥೆಗಳಿಂದ ಸಾಲ ಸೌಲಭ್ಯ ಪಡೆದಿರಬಾರದು, ಬ್ಯಾಂಕ್ನ ಪಾಸ್ ಬುಕ್ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ ಲಗತ್ತಿಸಬೇಕು.
ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ಪುರಸಭೆ, ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ ಹಾಗೂ ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ರವರಿಂದ ನಿಗಧಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅವಧಿಯಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ವಿಕಲಚೇತನರ ಸಹಾಯವಾಣಿ ಕೇಂದ್ರ: 080-29787441 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

20 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

21 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

21 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

22 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

22 hours ago