ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಮುಖಾಂತರ ವಿಕಲಚೇತನತೆಯನ್ನು ನಿವಾರಣೆ ಮಾಡಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 1 ಲಕ್ಷ ರೂಪಾಯಿ ವರೆಗೆ ಸಹಾಯ ಧನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ ನ್ಯಾಷನಲ್ ಟ್ರಸ್ಟ್ ಆಕ್ಟ್ ಅಡಿಯಲ್ಲಿ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಕುಟಂಬದ ವಿಕಲಚೇತನ ವ್ಯಕ್ತಿ ಒಂದು ಬಾರಿ ವಾರ್ಷಿಕ 250 ರೂಪಾಯಿಗಳನ್ನು ಸರ್ಕಾರದಿಂದ ವಿಮಾ ಕಂತಾಗಿ ಪಾವತಿಸಿ ಪ್ರತಿವರ್ಷ ಒಂದು ಲಕ್ಷಗಳವರೆಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ ಪಡೆಯಬಹುದು ಎಂದರು.
ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆ ಅಡಿಯಲ್ಲಿ ಕಡ್ಡಾಯ ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಸಿ, ಗುರುತು ಹಚ್ಚಿದ ತೀವ್ರತರವಾದ/ಗಂಭೀರ ಸ್ವರೂಪದ ಶ್ರವಣದೋಷವುಳ್ಳ 6 ವರ್ಷದ ಕೆಳಗಿನ ಮಕ್ಕಳಿಗೆ ಶ್ರವಣ ಸಾಧನಗಳನ್ನು ನೀಡಲಾಗುವುದು. ಜೊತೆಗೆ ಟ್ರಯಲ್ ಆಡಿಟರಿವರ್ಬಲ್ ಥೆರಪಿಯನ್ನು ಒದಗಿಸಲಾಗುವುದು, ವಿವಿಧ ಥೆರಪಿ ಚಿಕತ್ಸೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದ್ದು, 2016-17 ರಿಂದ ಇಲ್ಲಿಯವರೆಗೆ 665 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಜೊತೆಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ 4 ಬಗೆಯ ವಿಕಲಚೇತನರಿಗೆ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ಗರಿಷ್ಠ 1 ಲಕ್ಷದವರೆಗೆ ಶಸ್ತ್ರಚಿಕಿತ್ಸೆ ಹಾಗೂ ವೈದ್ಯಕೀಯ ವೆಚ್ಚಗಳನ್ನು ಕೇಂದ್ರ ಸರ್ಕಾರ ಗುರುತಿಸಿರುವ ಸಂಸ್ಥೆಯ ಮುಖಾಂತರ ಪಡೆಯುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…