Featured

ವಿಕೃತ ಮನಸ್ಥಿತಿಯವರು ಮಾತ್ರ 100 ಕೋಟಿ ಲಸಿಕೆ ಕೊಟ್ಟಿದ್ದೇವೆಂದು ಸಂಭ್ರಮ ಪಟ್ಟು ಪ್ರಚಾರ ಪಡೆಯುತ್ತಾರೆ : ಕಾಂಗ್ರೆಸ್ ಮುಖಂಡ  ಹರಿಪ್ರಸಾದ್ – Vishwanews24

ವಿಕೃತ ಮನಸ್ಥಿತಿಯವರು ಮಾತ್ರ 100 ಕೋಟಿ ಲಸಿಕೆ ಕೊಟ್ಟಿದ್ದೇವೆಂದು ಸಂಭ್ರಮ ಪಟ್ಟು ಪ್ರಚಾರ ಪಡೆಯುತ್ತಾರೆ : ಕಾಂಗ್ರೆಸ್ ಮುಖಂಡ  ಹರಿಪ್ರಸಾದ್ – Vishwanews24

ಪ್ರಧಾನಿ  ಮೋದಿ ಹಾಗೂ ಬಿಜೆಪಿ ನಾಯಕರು ಸಂಭ್ರಮಿಸಿ ಪ್ರಚಾರ ಪಡೆಯುವ ಬದಲು, ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ..

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರದ ಅಸಮರ್ಥತೆಯಿಂದಾಗಿ ಕೋವಿಡ್ ನಿಂದ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಜನ ಔಷಧಿ, ಆಕ್ಸಿಜನ್, ಲಸಿಕೆ ಸಿಗದೆ ಪರದಾಟ ನಡೆಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು 100 ಕೋಟಿ ಡೋಸ್ ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಿಸಿ ಪ್ರಚಾರ ಪಡೆಯುವ ಬದಲು, ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 100 ಕೋಟಿ ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಿಸುತ್ತಾ ಪ್ರಚಾರ ಪಡೆಯುತ್ತಿರುವ ಕೇಂದ್ರ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ, ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ ನೀಡಲಾಗಿದೆ ಎಂಬುದನ್ನು ಜನರಿಗೆ ತಿಳಿಸಲಿ. ಇಂದು ದೇಶದ ಪ್ರಧಾನಮಂತ್ರಿಗಳು ಹಾಗೂ ಆರೋಗ್ಯ ಸಚಿವರು 100 ಕೋಟಿ ಲಸಿಕೆ ನೀಡಿದ್ದೇವೆ ಎಂದು ಸಂಭ್ರಮಿಸುತ್ತಿದ್ದಾರೆ. ಕೋವಿಡ್ ಇಡೀ ವಿಶ್ವದಲ್ಲಿ ಜನರನ್ನು ಯಾವ ರೀತಿ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ನಾವೆಲ್ಲರೂ ನೋಡಿದ್ದೇವೆ. ಈ ಸಮಯದಲ್ಲಿ ಜನರಿಗೆ ಸ್ಪಂದಿಸುವ ವಿಚಾರದಲ್ಲಿ ಸರ್ಕಾರ ಹಾಗೂ ನಾವೆಲ್ಲ ವಿಫಲರಾಗಿದ್ದೇವೆ. ಈ ಸಂದರ್ಭದಲ್ಲಿ ಜನ ಸರ್ಕಾರದ ಮೇಲೆ ಅವಲಂಬಿಸುವುದು ಸಹಜ. ವಿರೋಧ ಪಕ್ಷವಾಗಿ ನಾವು ಎಲ್ಲ ರೀತಿಯ ಸಹಕಾರ ನೀಡಿದ್ದೇವೆ ಎಂದರು.

100 ಕೋಟಿ ಲಸಿಕೆ ವಿಚಾರ ಸಂಭ್ರಮಿಸುವ ವಿಚಾರವಲ್ಲ. ಪ್ರತಿಯೊಬ್ಬ ನಾಗರೀಕನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕೋವಿಡ್ ಮಹಾಮಾರಿ ಸಂಕಟ ತಟ್ಟಿದೆ. ಈ ಮಧ್ಯೆ ಎಷ್ಟು ಜನ ಸತ್ತಿದ್ದಾರೆ ಎಂಬ ನೈಜ ಅಂಕಿ ಅಂಶ ಸರ್ಕಾರ ನೀಡುತ್ತಿಲ್ಲ. ಕೋವಿಡ್ ಬಂದಾಗ ಅವೈಜ್ಞಾನಿಕವಾಗಿ ಗಂಟೆ, ತಟ್ಟೆ ಬಾರಿಸಿದರೆ ಹೊರತು, ಅದನ್ನು ಯಾವ ರೀತಿ ಎದುರಿಸಬೇಕು ಎಂದು ಹೇಳುವ ಪ್ರಯತ್ನ ಮಾಡಲಿಲ್ಲ. ಆರೋಗ್ಯ ಸಚಿವರು ಇಂದು ನೀಡಿರುವ ಮಾಹಿತಿಯಲ್ಲಿ ಈ 100 ಕೋಟಿ ಲಸಿಕೆ ಕೊಟ್ಟಿರೋದು 1 ಲಸಿಕೆ ಮಾತ್ರ. ಅದಕ್ಕೆ ಇವರು ಸಂಭ್ರಮಿಸುತ್ತಿದ್ದಾರೆ. 70 ಕೋಟಿ ಜನರಿಗೆ ಒಂದು ಡೋಸ್, ಕೇವಲ 20-30 ಕೋಟಿ ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ. ಇಡೀ ವಿಶ್ವದಲ್ಲೇ ಲಸಿಕೆ ಉತ್ಪಾದನೆಯಲ್ಲಿ ಅಗ್ರಸ್ಥಾನ ಪಡೆದಿರುವ ಭಾರತದಲ್ಲಿ ಇಷ್ಟು ದಿನಗಳಲ್ಲಿ ಕೇವಲ ಒಂದು ಡೋಸ್ ಮಾತ್ರ ನೀಡುತ್ತಿರುವುದು ಸಂಭ್ರಮಿಸುವ ವಿಚಾರವೇ?’ ಬೇರೆ ರಾಷ್ಟ್ರಗಳಲ್ಲಿ ಈಗಾಗಲೇ ಎರಡು ಡೋಸ್ ಗಳ ಬಳಿಕ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಧಾನಮಂತ್ರಿಗಳು ಮಾತನಾಡುತ್ತಿಲ್ಲ. ಇಂತಹ ವಿಚಾರವಾಗಿ ಅವರು ಮಾತನಾಡಿ ಜನರಿಗೆ ಧೈರ್ಯ ತುಂಬಬೇಕಾಗಿದೆ ಎಂದು ಹರಿಪ್ರಸಾದ್ ಹೇಳಿದರು.

ವಿಕೃತ ಮನಸ್ಥಿತಿಯವರು ಮಾತ್ರ 100 ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮ ಪಟ್ಟು ಪ್ರಚಾರ ಪಡೆಯುತ್ತಾರೆ. ದೇಶದ ಜನರಿಗೆ ಇಷ್ಟು ದಿನವಾದರೂ 2 ಡೋಸ್ ನೀಡಲು ಆಗಿಲ್ಲ, ಜನರು ಕಷ್ಟ ಅನುಭವುಸಿದ್ದು, ಈಗ ಸಂಭ್ರಮಿಸುವ ಬದಲು ಕ್ಷಮೆ ಕೋರಲಿ ಎಂದು ಆಗ್ರಹಿಸಿದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago