Featured

ವಿಚ್ಛೇದಿತ ಮುಸ್ಲಿಂ ಮಹಿಳೆ  ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್  ಮಹತ್ವದ ತೀರ್ಪು – vishwanews24

ವಿಚ್ಛೇದಿತ ಮುಸ್ಲಿಂ ಮಹಿಳೆ  ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್  ಮಹತ್ವದ ತೀರ್ಪು

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ  ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್  ಮಹತ್ವದ ತೀರ್ಪು ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಅರ್ಜಿ ವಜಾಗೊಳಿಸಿದೆ.

ಜೀವನಾಂಶವನ್ನು ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾಯಮೂರ್ತಿ ಮಾಸಿಹ್ ಅವರು ಪ್ರತ್ಯೇಕ, ಆದರೆ ಏಕಕಾಲೀನ ತೀರ್ಪುಗಳನ್ನು ನೀಡಿದರು.

ಸೆಕ್ಷನ್ 125 ವಿವಾಹಿತ ಮಹಿಳೆಯರಿಗೆ ಮಾತ್ರವಲ್ಲ, ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ. ಈ ಪ್ರಮುಖ ತೀರ್ಮಾನದೊಂದಿಗೆ ನಾವು ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ನ್ಯಾಯಮೂರ್ತಿ ನಾಗರತ್ನ ತಿಳಿಸಿದ್ದಾರೆ.

ಜೀವನಾಂಶ ದಾನವಲ್ಲ, ವಿವಾಹಿತ ಮಹಿಳೆಯರ ಹಕ್ಕು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ನಾಗರತ್ನ ಅವರು, ಗೃಹಿಣಿಯಾಗಿರುವ ಹೆಂಡತಿ ಭಾವನಾತ್ಮಕವಾಗಿ ಮತ್ತು ಇತರ ರೀತಿಯಲ್ಲಿ ಅವಲಂಬಿತಳಾಗಿದ್ದಾಳೆ ಎಂಬ ಅಂಶದ ಬಗ್ಗೆ ಕೆಲವು ಗಂಡಂದಿರಿಗೆ ಪ್ರಜ್ಞೆ ಇರುವುದಿಲ್ಲ. ಭಾರತೀಯ ಪುರುಷನು ಗೃಹಿಣಿಯ ಪಾತ್ರವನ್ನು ಗುರುತಿಸಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

16 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

16 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

16 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

20 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

20 hours ago