ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದೆ.
ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತ ದುರ್ದೈವಿ. ಸೋಲಾಪುರದ ಡಿಜೆ ಯುವಕ ಪ್ರಭಾಕರ್ ಜಂಗಲೆ (22), ಡೋಬಲೆ ಗಲ್ಲಿಯ ಲಖನ್ ಶ್ರೀಕಾಂತ್ ಚವ್ಹಾಣ್ (28) ಸ್ಥಿತಿ ಗಂಭೀರವಾಗಿದೆ.
7ನೇ ದಿನ ಗಣೇಶನ ವಿಸರ್ಜನೆಗೆ ಮೂರ್ತಿಯನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಯುವಕರು ಡಿಜೆ ಬಾಕ್ಸ್ ಮೇಲೆ ಕುಳಿತು ಕೋಲಿನಿಂದ ವಿದ್ಯುತ್ ತಂತಿಯನ್ನು ಎತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಶುಭಂ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…