Featured

ವಿಜಯಪುರ  : 53 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ ; ಜನರಲ್ಲಿ ಆತಂಕ – vishwanews24

ವಿಜಯಪುರ  : 53 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ ; ಜನರಲ್ಲಿ ಆತಂಕ

ವಿಜಯಪುರ: ವಿಜಯಪುರ ನಗರದ ಸುತ್ತಲೂ ಐದು ದಿನಗಳ ಅಂತರದಲ್ಲಿ ಭಾನುವಾರ ತಡರಾತ್ರಿ ಮತ್ತೆ ಎರಡು ಬಾರಿ ಲಘು ಭೂಕಂಪನ‌ಗಳು ಸಂಭವಿಸಿವೆ.

ಜಿಲ್ಲೆಯ ಮನಗೂಳಿ ಪರಿಸರದಲ್ಲಿ ಕೇಂದ್ರಿತವಾಗಿದ್ದ ಎರಡೂ ಭೂಕಂಪನಗಳು 2.6 ತೀವ್ರತೆ ಹೊಂದಿದ್ದವು. ಎರಡು ಬಾರಿ ಭೂಕಂಪನಗಳು ಸಂಭವಿಸಿದರೂ ಯಾವುದೇ ಅಪಾಯ ಸಂಭವಿಸಿಲ್ಲ.

53 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ, ಯರನಾಳ ಗ್ರಾ.ಪಂ. ಪರಿಸರದ ಹತ್ತರಕಿಹಾಳ, ನಂದಿಹಾಳ, ವಿಜಯಪುರ ನಗರದ ವಿವಿಧ ಬಡಾವಣೆಗಳ ವ್ಯಾಪ್ತಿಯಲ್ಲಿ ಸರಣಿ ಭೂಕಂಪನಗಳು ಸಂಭವಿಸಿರುವುದು ದೃಢಪಟ್ಟಿದೆ.

ವಿಜಯಪುರ ನಗರದ ಜಲನಗರ, ಇಬ್ರಾಹಿಂಪುರ, ಗಣೇಶನಗರ, ಕೀರ್ತಿನಗರ, ಬಸವನಗರ, ವಜ್ರಹನುಮಾನ ಪ್ರದೇಶ ಹೀಗೆ ವಿವಿಧ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ಮೊದಲ ಭೂಕಂಪ ಭಾನುವಾರ ಮಧ್ಯರಾತ್ರಿ 12 ಗಂಟೆ 22ನಿಮಿಷ 52 ಸೆಕೆಂಡಿಗೆ ಸಂಭವಿಸಿದ್ದು, ಭೂಮಿಯ 5 ಕಿ.ಮೀ. ಆಳದಲ್ಲಿ ಕೇಂದ್ರೀಕೃತವಾಗಿತ್ತು.

ಇದಾದ 53 ನಿಮಿಷಕ್ಕೆ ಅಂದರೆ ಮಧ್ಯರಾತ್ರಿ 1 ಗಂಟೆ 15 ನಿಮಿಷ 14 ಸೆಕೆಂಡಿಗೆ ಸಂಭವಿಸಿದ ಎರಡನೇ ಭೂಕಂಪ ಭೂಮಿಯ 7 ಕಿ.ಮೀ. ಆಳದಲ್ಲಿ ಕೇಂದ್ರೀತ ವಾಗಿತ್ತು. ಎರಡೂ ಭೂಕಂಪನಗಳು 2.6 ತೀವ್ರತೆ ಹೊಂದಿದ್ದವು.

ಗಾಢ ನಿದ್ದೆಯಲ್ಲಿದ್ದ‌ ಜನರಿಗೆ ಭೂಮಿ ನಡುಗುವ ಅನುಭವ ಆಗುತ್ತಲೇ ಮನೆಗಳ ಗೋಡೆಗಳಿಗೆ ಹಾಕಿದ್ದ ಪಾತ್ರೆಗಳು ಸೇರಿದಂತೆ ಇತರೆ ವಸ್ತುಗಳು ಅಲುಗಾಡಿ ಸದ್ದು ಮಾಡಿವೆ.ಜನರು ಗಾಢ ನಿದ್ರೆಯಲ್ಲಿದ್ದರೂ ಎಚ್ಚರಗೊಂಡ ಹಲವರು ತಮ್ಮ ಮನೆಯವರನ್ನು ಎಬ್ಬಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ.

ಜಿಲ್ಲೆಯಲ್ಲಿ ಗುರುವಾರವಷ್ಟೇ ಲಘು ಭೂಕಂಪನ ಸಂಭವಿಸಿದ್ದು, ಇದೀಗ ಐದು ದಿನಗಳ ಅಂತರದಲ್ಲಿ ಮತ್ತೊಮ್ಮೆ ಸರಣಿ ಭೂಕಂಪ ಸಂಭವಿಸಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢೀಕರಿಸಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಲಘು ಭೂಕಂಪನ ಅಪಾಯ ರಹಿತವಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯದ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮನವಿ ಮಾಡಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

14 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago