ಮಂಗಳೂರು, : ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್‌ನೊಂದಿಗೆ ವಿಲೀನ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಜವನರಿ 9 ರಂದು ಮಂಗಳೂರು ಬಂದ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕರೆ ನೀಡಿದೆ.
ಜ.6ರ ಭಾನುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೇಂದ್ರ ಸರಕಾರದ ನಿರ್ಧಾರ ವಿರೋಧಿಸಿ ಜ.9ರಂದು ಬಂದ್ ನಡೆಸಲಾಗುವುದು ಎಂದರು.
ಲಾಭದಲ್ಲಿರುವ ಕರಾವಳಿ ಮೂಲದ ವಿಜಯಾ ಬ್ಯಾಂಕ್ ಅನ್ನು ನಷ್ಟದಲ್ಲಿರುವ ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದರೂ, ಸಂಸದ ನಳಿನ್‌ಕುಮಾರ್ ಕಟೀಲ್ ಮೌನ ವಹಿಸಿರುವುದು ಯಾಕೆ, ಪ್ರಧಾನಿಯವರಿಗೆ ಸಂಸದರು ಜಿಲ್ಲೆಯನ್ನು ಒತ್ತೆ ಇಟ್ಟಿದ್ದಾರೆಯೇ ಎಂದು’ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಈ ಪ್ರತಿಭಟನೆಗೆ ಸಂಸದರು ಕೂಡಾ ಬೆಂಬಲ ನೀಡಲಿ ಎಂದು ಒತ್ತಾಯಿಸಿದರು.
ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಜನವರಿ 9 ರಂದು ಮಂಗಳೂರು ಬಂದ್ ಗೆ ಕರೆ ನೀಡುವುದಾಗಿ ತಿಳಿಸಿದ ಅವರು ಜನವರಿ 9ರಂದು ಬೆಳಗ್ಗೆ 6ರಿಂದ ಸಂಜೆ 4 ರವರೆಗೆ ಜಿಲ್ಲೆಯನ್ನು ಬಂದ್ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…