desha

ವಿಜಯಾ ಬ್ಯಾಂಕ್ ವಿಲೀನಕ್ಕೆ ರಮಾನಾಥ ರೈ ಆಕ್ರೋಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ್ಮತಳೆದಿರುವ 87 ವರ್ಷದ ಇತಿಹಾಸವಿರುವ ಸಾರ್ವಜನಿಕ ವಲಯದ ವಿಜಯಾ ಬ್ಯಾಂಕ್‌ ಅನ್ನು ದೇನಾ ಬ್ಯಾಂಕ್‌ ಜೊತೆ ವಿಲೀನಗೊಳಿಸುವುದನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿ ವಿರೋಧಿಸಿದೆ. ಈ ಸಂಬಂಧ ಜಿಲ್ಲೆಯ ಜನರು ನಡೆಸುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದೆ.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷವಾಯಿತು. ಲಾಭದಲ್ಲಿರುವ ವಿಜಯಾ ಬ್ಯಾಂಕ್‌ ಅನ್ನು ನಷ್ಟದಲ್ಲಿರುವ ದೇನಾ ಬ್ಯಾಂಕ್‌ ಜೊತೆ ವಿಲೀನ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಬಲವಾಗಿ ವಿರೋಧಿಸುತ್ತದೆ’ ಎಂದರು.

ಅತ್ತಾವರ ಬಾಲಕೃಷ್ಣ ಶೆಟ್ಟಿ ಸ್ಥಾಪಿಸಿದ ವಿಜಯಾ ಬ್ಯಾಂಕ್‌ಗೆ ಮೂಲ್ಕಿ ಸುಂದರರಾಮ ಶೆಟ್ಟಿಯವರು ಸಂಸ್ಥಾಪಕ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಒಂದು ಕಾಲದಲ್ಲಿ ಬ್ಯಾಂಕ್‌ ನಷ್ಟದ ಸುಳಿಗೆ ಸಿಲುಕಿತ್ತು. ಆಗ ಬ್ಯಾಂಕ್‌ ನೌಕರರು ಸಂಬಳ ಪಡೆಯದೇ ಕೆಲಸ ಮಾಡಿ ಸಂಸ್ಥೆಯನ್ನು ಉಳಿಸಿದ್ದರು. ಈಗ ವಿಜಯಾ ಬ್ಯಾಂಕ್‌ ಅನ್ನು ವಿಲೀನಗೊಳಿಸುವ ಮೂಲಕ ಬ್ಯಾಂಕ್‌ ನೌಕರರು ಮತ್ತು ಜಿಲ್ಲೆಯ ಜನರಿಗೆ ನೋವು ನೀಡಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ದೂರಿದರು.

ವಿಜಯಾ ಬ್ಯಾಂಕ್‌ ಅಸ್ತಿತ್ವ ಕಳೆದುಕೊಂಡರೆ ಜಿಲ್ಲೆಗೆ ಹಿನ್ನಡೆಯಾಗುತ್ತದೆ. ಇಂತಹ ಬೆಳವಣಿಗೆ ನಡೆಯುತ್ತಿದ್ದರೂ ಜಿಲ್ಲೆಯ ಸಂಸದರು ಮೌನವಾಗಿದ್ದಾರೆ. ಬಂಟ ಸಮುದಾಯದವರು ಸ್ಥಾಪಿಸಿದ ಬ್ಯಾಂಕ್‌ ಈಗ ಸಾರ್ವಜನಿಕ ಸಂಸದ ಮತ್ತು ಬಂಟ ಸಮುದಾಯದ ಶಾಸಕರು ಕೂಡ ಈ ಬಗ್ಗೆ ಮಾತನಾಡುತ್ತಿಲ್ಲ. ಇದು ದುಃಖದ ಸಂಗತಿ ಎಂದು ಹೇಳಿದರು.

ಯುಪಿಎ ಸರ್ಕಾರ ರೈತರ ಪರವಾಗಿತ್ತು. ಅದು ರೈತರ ₹ 78,000 ಕೋಟಿ ಸಾಲ ಮನ್ನಾ ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಉದ್ಯಮಿಗಳ ಪರವಾಗಿದೆ. ಈ ಕಾರಣಕ್ಕಾಗಿಯೇ ಅದು ಕಾರ್ಪೋರೇಟ್ ವಲಯದ ₹ 2 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಈಗ ವಿಜಯಾ ಬ್ಯಾಂಕ್‌ನಂತಹ ಜನಸಾಮಾನ್ಯರ ಬ್ಯಾಂಕ್‌ ಅಸ್ತಿತ್ವವನ್ನೇ ನಾಶಮಾಡುವ ಮೂಲಕ ಮತ್ತೊಂದು ಬರೆ ಎಳೆಯಲು ಹೊರಟಿದೆ ಎಂದು ರೈ ವಾಗ್ದಾಳಿ ನಡೆಸಿದರು.

1980ರ ದಶದಲ್ಲಿ ನ್ಯೂ ಬ್ಯಾಂಕ್‌ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಜೊತೆ ವಿಲೀನವಾಗಿತ್ತು. ಇಂದಿಗೂ ಅದರ ದುಷ್ಪರಿಣಾಮಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ವಿವಿಧ ಸ್ಟೇಟ್‌ ಬ್ಯಾಂಕ್‌ಗಳನ್ನು ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ಜೊತೆ ವಿಲೀನಗೊಳಿಸಿದ ನಂತರವೂ ಅನೇಕ ಕೆಟ್ಟ ಪರಿಣಾಮಗಳಾಗಿವೆ. ಇವೆಲ್ಲವೂ ಕಣ್ಣೆದುರಿನಲ್ಲಿ ಇರುವಾಗ ವಿಜಯಾ ಬ್ಯಾಂಕ್‌ ವಿಲೀನಕ್ಕೆ ಸಮ್ಮತಿ ನೀಡುವುದು ಸರಿಯಲ್ಲ ಎಂದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago