Featured

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆಯಾದರೆ ನಮ್ಮ ನಿರ್ಣಯ ತಿಳಿಸುತ್ತೇವೆ: ಯತ್ನಾಳ್ – vishwanews24

ಹೈಕಮಾಂಡ್ ನ ಜಾತಿ ಲೆಕ್ಕಾಚಾರ ನೋಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಣಕ್ಕೆ : ಯತ್ನಾಳ್

ಕಲಬುರಗಿ: ಒಂದು ವೇಳೆ ಬಿ.ವೈ.ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದರೆ, ನಮ್ಮ ನಿರ್ಣಯ ತಿಳಿಸುತ್ತೇವೆ. ನಮ್ಮ ಹೋರಾಟವಂತೂ ಮುಂದುವರಿಯುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಪಕ್ಷದ ವರಿಷ್ಠರನ್ನು ಎಚ್ಚರಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಸೇಡಂ ಬಳಿಯ ಬೀರನಳ್ಳಿ ಕ್ರಾಸ್ನಲ್ಲಿ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದಾಗಿ ವಿಜಯೇಂದ್ರರ ಹೇಳಿಕೆ ಬಗ್ಗೆ ಈ ರೀತಿ ಪ್ರತಿಕ್ರಿಯಿಸಿದರು.

ಚುನಾವಣೆ ನಡೆದು ವಿಜಯೇಂದ್ರ ಮತ್ತೊಮ್ಮೆ ರಾಜ್ಯಾಧ್ಯಕ್ಷ ಆಗಲಿ. ಬೇಡ ಅಂದವರಾರು.? ಅಲ್ಲಿವರೆಗೂ ನನಗೆ ಓಟ್ ಹಾಕಿ ನನಗೆ ಓಟ್ ಹಾಕಿ ಅಂತ ಕೈ ಮುಗಿದು ಅವರು ಓಡಾಡಬೇಕಲ್ವಾ.? ಕೆಲವರಿಗೆ ಕೈ ಮುಗಿಯೋದಾದರು ನಾವು ಕಲಿಸಿದ ಹಾಗೆ ಆಗುತ್ತದೆ ಎಂದು ಯತ್ನಾಳ್ ವ್ಯಂಗ್ಯವಾಡಿದರು

ಮಾಜಿ ಸಚಿವ ಶ್ರೀರಾಮುಲು ರಾಜ್ಯಾಧ್ಯಕ್ಷ ಆದರೆ ನಮ್ಮದೇನೂ ತಕರಾರಿಲ್ಲ. ಅವರೂ ನಮ್ಮವರೆ. ಅವರಾದರೆ, ನಮ್ಮ ಬೆಂಬಲ ಇರುತ್ತೆ. ರಾಜ್ಯದ ಎಲ್ಲಾ ಸಂಸದರು ನಮ್ಮ ಜೊತೆಗಿದ್ದಾರೆ. ವಿಜಯೇಂದ್ರ ಒಬ್ಬರನ್ನು ಬಿಟ್ಟು, ಯತ್ನಾಳ್ ರಾಜ್ಯಾಧ್ಯಕ್ಷ ಆಗಬೇಕು ಎಂಬ ಕೂಗಿದು, ಏನಾಗುತ್ತೋ ನೋಡೋಣ ಎಂದರು.

ನಮ್ಮ ಬಣದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದರ ಕುರಿತು ಚರ್ಚಿಸಿ ನಿರ್ಣಯ ತೆಗೆದುಕೊಳ್ಳುತ್ತೇವೆ. ನಮ್ಮ ಪಕ್ಷದ ಹೈಕಮಾಂಡ್ ಜಾತಿ ಲೆಕ್ಕಾಚಾರ ನೋಡಿಕೊಂಡು ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದ್ದು, ಅದೇ ಜಾತಿಯವರನ್ನು ನಾವು ಕೂಡಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವುದು ಖಂಡಿತ ಎಂದು ಯತ್ನಾಳ್ ಹೇಳಿದರು.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago