Featured

ವಿಜಯ ಬ್ಯಾಂಕ್ ಇನ್ನು ಮುಂದೆ ನೆನಪು ಮಾತ್ರ : ಏ.1 ರಿಂದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನ – Vishwanews24

ಉಡುಪಿ : ಏ.೧ ರಿಂದ ದಕ್ಷಿಣ ಕನ್ನಡ ಮೂಲದ ವಿಜಯ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡ ಜತೆ ವಿಲೀನಗೊಳ್ಳಲಿದೆ. ಈ ಕುರಿತು  ಇದೀಗ ಅಧಿಕೃತವಾಗಿ ಬ್ಯಾಂಕಿನ ಗ್ರಾಹಕರಿಗೆ ಸಂದೇಶ ರವಾನೆಯಾಗಿದೆ.  ಎಪ್ರಿಲ್ 1ರಿಂದ ವಿಜಯ ಬ್ಯಾಂಕ್‌ ಹೆಸರೂ, ಹಳದಿ ಲೋಗೋ ಕೂಡ ಗ್ರಾಹಕರ ಕಣ್ಣಿಂದ ಕಣ್ಮರೆಯಾಗಲಿದೆ.  ಇನ್ನೇನಿದ್ದರೂ ಬ್ಯಾಂಕ್ ಹೆಸರು ಇತಿಹಾಸದ  ಪುಟ ಸೇರಲಿದೆ.
ಕರಾವಳಿಯ ಹೆಮ್ಮೆಯ ವಿಜಯ ಬ್ಯಾಂಕ್‌ ಅನ್ನು ಬ್ಯಾಂಕ್‌ ಆಫ್‌ ಬರೋಡ ಜತೆಗೆ ವಿಲೀನಗೊಳಿಸುವ ನಿರ್ಧಾರ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅದರಲ್ಲಿಯೂ ದ.ಕ., ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ವಿರೋಧ-ಪ್ರತಿಭಟನೆಗಳು ನಡೆದರೂ, ಆದರೆ, ಅಸ್ತಿತ್ವ ಉಳಿಸುವ ಸಂಬಂಧ ವಿಜಯ ಬ್ಯಾಂಕ್‌ ನಿವೃತ್ತ ಅಧಿಕಾರಿಗಳು, ಅಭಿಮಾನಿಗಳ ಹೋರಾಟದ ನಡುವೆಯೂ ವಿಲೀನಗೊಳಿಸುವ ಪ್ರಕ್ರಿಯೆಗಳು ನಡೆದಿತ್ತು. ಕೊನೆಯ ಹಂತದಲ್ಲಿಯಾದರೂ ಲಾಭದಲ್ಲಿರುವ ವಿಜಯ ಬ್ಯಾಂಕ್‌ ಅನ್ನು ವಿಲೀನ ಪ್ರಕ್ರಿಯೆ ಯಿಂದ ಕೈಬಿಡಬಹುದು ಎನ್ನುವ ನಿರೀಕ್ಷೆ ಹೋರಾಟಗಾರರಲ್ಲಿ, ಕರಾವಳಿಗರಲ್ಲಿ ಇತ್ತು. ಆ ನಿರೀಕ್ಷೆ ಈಗ ಹುಸಿಯಾಗಿದೆ. ವಿಜಯಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಆಗಲಿದ್ದು  ವಿಜಯಾ ಬ್ಯಾಂಕ್ ಜೊತೆ ವ್ಯವಹಾರ ನಡೆಸುವವರಿಗೆ ಏನೂ ತೊಂದರೆ ಇಲ್ಲ.

“ಬ್ಯಾಂಕ್‌ಗಳ ತೊಟ್ಟಿಲು” ಎಂದೇ ಖ್ಯಾತಿ ಪಡೆದಿರುವ ಕರಾವಳಿಯಲ್ಲಿಯೇ ಕೆನರಾ ಬ್ಯಾಂಕ್‌, ವಿಜಯ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌, ಕಾರ್ಪೊರೇಷನ್‌ ಬ್ಯಾಂಕ್‌ ಹಾಗೂ ಖಾಸಗಿ ಕರ್ನಾಟಕ ಬ್ಯಾಂಕ್‌ಗಳು ಸ್ಥಾಪನೆಯಾಗಿದ್ದು . ಈ ಪೈಕಿ ಕಾರ್ಪೊರೇಷನ್‌ ಬ್ಯಾಂಕ್‌, ಕರ್ನಾಟಕ ಬ್ಯಾಂಕ್‌ ಪ್ರಧಾನ ಕಚೇರಿ ಮಂಗಳೂರಿನಲ್ಲಿದ್ದರೆ, ಸಿಂಡಿಕೇಟ್‌ ಬ್ಯಾಂಕ್‌ ಪ್ರಧಾನ ಕಚೇರಿ ಮಣಿಪಾಲದಲ್ಲಿದೆ. ಉಳಿದೆಲ್ಲ ಬ್ಯಾಂಕ್‌ಗಳು ಪ್ರಧಾನ ಕಚೇರಿಗಳು ಬೆಂಗಳೂರಿಗೆ ಸ್ಥಳಾಂತರಗೊಂಡಿವೆ.

ಅತ್ತಾವರ ಬಾಲಕೃಷ್ಣ ಶೆಟ್ಟಿ ಅವರಿಂದ ಮಂಗಳೂರಿನ ಬಂಟ್ಸ್‌ ಹಾಸ್ಟೆಲ್‌ನ ಸಣ್ಣ ಕೊಠಡಿಯೊಂದರಲ್ಲಿ ಪ್ರಗತಿಪರ ರೈತರ ಬೆಂಬಲದೊಂದಿಗೆ ವಿಜಯ ಬ್ಯಾಂಕ್‌ ಸ್ಥಾಪನೆಯಾಯಿತು. ವಿಜಯ ದಶಮಿಯಂದು ಬ್ಯಾಂಕ್‌ ಪ್ರಾರಂಭಗೊಂಡಿದ್ದರಿಂದ ವಿಜಯ ಬ್ಯಾಂಕ್‌ ಎನ್ನುವ ಹೆಸರನ್ನು ಇಡಲಾಯಿತು. ಆದರೆ ಇವೆಲ್ಲವೂ ಕರಾವಳಿಗರ ಪಾಲಿಗೆ ಇನ್ನುಮುಂದೆ ನೆನಪು ಮಾತ್ರ.

ದೇನಾ, ವಿಜಯ ಬ್ಯಾಂಕ್ ಗ್ರಾಹಕರು ಏನು ಮಾಡಬೇಕು?
1. ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ಸಿಗಲಿದೆ.
2. ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲರಿಗೂ ಹೊಸ ಖಾತೆ ನಂಬರ್ ದೊರೆತ ಕೂಡಲೇ, ಆದಾಯ ತೆರಿಗೆ ಇಲಾಖೆ, ವಿಮೆ, ಪಿಂಚಣಿಗಳಿಗೆ ಮಾಹಿತಿಯನ್ನು ನೀಡಬೇಕು.
3. ಸಾಲಗಾರರು ಅಥವಾ ಇಎಂಐ ಗ್ರಾಹಕರು ಹೊಸ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.
4. ಬ್ಯಾಂಕ್ ಆಫ್ ಬರೋಡಾಗೆ ಸೇರ್ಪಡೆಯಾಗುವ ಎಲ್ಲ ಗ್ರಾಹಕರಿಗೆ ಹೊಸ ಡೆಬಿಟ್ ಕಾರ್ಡ್, ಚೆಕ್‍ಬುಕ್ ಮತ್ತು ಕ್ರೆಡಿಟ್ ಕಾರ್ಟ್ ನೀಡಲಾಗುತ್ತದೆ.
6. ವಾಹನಗಳ ಮೇಲಿನ ಸಾಲ, ಗೃಹ ಸಾಲ, ವೈಯಕ್ತಿಕ ಸಾಲ ಪಡೆದ ಗ್ರಾಹಕರು ಪಾವತಿಸುತ್ತಿರುವ ಬಡ್ಡಿ ಮೊತ್ತದಲ್ಲಿ ಯಾವುದೇ ಬದಲಾವಣೆಗಳಿಲ್ಲ.
7. ಬ್ಯಾಂಕ್‍ಗಳ ವಿಲೀನದಿಂದಗ ಕೆಲ ಶಾಖೆಗಳು ಬಂದ್ ಆಗಲಿವೆ. ಹಾಗಾಗಿ ಗ್ರಾಹಕರು ಸಮೀಪದ ಬ್ಯಾಂಕ್ ಬರೋಡಾ ಬ್ಯಾಂಕ್ ಸಂಪರ್ಕಿಸಬೇಕು.

ಏನು ಬದಲಾಗಲಿದೆ?

ವಿಲೀನದ ನಂತರ ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲ ಬ್ಯಾಂಕ್ ಆಫ್ ಬರೋಡಾಗೆ ವರ್ಗಾವಣೆಯಾಗಲಿದ್ದಾರೆ.

– ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ನೀಡಲಾಗುತ್ತದೆ.

– ಸಾಲಗಾರರು, ಇಎಂಐ ಪಾವತಿಸುವವರು ಹೊಸ ಅರ್ಜಿ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.

– ಹೊಸ ಡೆಬಿಟ್ ಕಾರ್ಡ್, ಚೆಕ್ ಬುಕ್ ಮತ್ತು ಕ್ರೆಡಿಟ್ ಕಾರ್ಡ್ ನೀಡಲಾಗುವುದು.

3ನೇ ದೊಡ್ಡ ಬ್ಯಾಂಕ್

ಪಸ್ತುತ 45.85 ಲಕ್ಷ ಕೋಟಿ ಮೌಲ್ಯದ ವ್ಯವಹಾರಗಳೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. 15.8 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಎಚ್‍ಡಿಎಫ್‍ಸಿ ಎರಡನೇ ಸ್ಥಾನದಲ್ಲಿ, 11.02 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಐಸಿಐಸಿಐ ಮೂರನೇ ಸ್ಥಾನದಲ್ಲಿವೆ. ದೇನಾ ಮತ್ತು ವಿಜಯಾ ಬ್ಯಾಂಕ್‍ಗಳ ವಿಲೀನದಿಂದಾಗಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರದ ಮೌಲ್ಯ 15.4 ಲಕ್ಷ ಕೋಟಿ ಆಗಲಿದೆ. ಐಸಿಐಸಿಐ ಬ್ಯಾಂಕ್ ನ್ನು ಹಿಂದೆ ತಳ್ಳಿ ಬ್ಯಾಂಕ್ ಆಫ್ ಬರೋಡಾ ಮೂರನೇ ಸ್ಥಾನವನ್ನ ಅಲಂಕರಿಸಲಿದೆ.

‘2019 ಎ. 1ರಿಂದ ಬ್ಯಾಂಕ್‌ ಆಫ್‌ ಬರೋಡ, ವಿಜಯ ಬ್ಯಾಂಕ್‌. ದೇನಾ ಬ್ಯಾಂಕುಗಳು ಪರಸ್ಪರ ವಿಲೀನಗೊಳ್ಳಲಿವೆ. ಇನ್ನು ಮುಂದಿನ ದಿನಗಳಲ್ಲಿ ನೀವು ದೇಶದ 3ನೇ ಅತಿ ದೊಡ್ಡ ಬ್ಯಾಂಕ್‌ ನೆಟ್ವರ್ಕ್‌ ಜತೆ ವ್ಯವಹಾರ ನಡೆಸಲಿದ್ದೀರಿ. ನಿಮ್ಮ ಈಗಿರುವ ಖಾತೆ ಸಂಖ್ಯೆ, ಡೆಬಿಟ್/ ಕ್ರೆಡಿಟ್ ಕಾರ್ಡ್‌, ಮೊಬೈಲ್ ಮತ್ತು ನೆಟ್ ಬ್ಯಾಂಕಿಂಗ್‌ ಸೌಲಭ್ಯಗಳೊಂದಿಗೆ ಸೇವೆಗಳು ಯಥಾಸ್ಥಿತಿ ಮುಂದುವರಿಯಲಿವೆ. ವಿವರಗಳಿಗೆ ನಿಮ್ಮ ಈಗಿರುವ ವಿಜಯ ಬ್ಯಾಂಕ್‌ ಶಾಖೆಯನ್ನು ಸಂಪರ್ಕಿಸಬಹುದು.’

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago