Featured

ವಿಜೃಂಭಣೆಯಿಂದ ನಡೆಯುವ ಉಡುಪಿಯ ಉಚ್ಚಿಲ ದಸರಾ: 10 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ – vishwanews24

ವಿಜೃಂಭಣೆಯಿಂದ ನಡೆಯುವ ಉಡುಪಿಯ ಉಚ್ಚಿಲ ದಸರಾ: 10 ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

ಕಾಪು: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024 ಪ್ರಯುಕ್ತ 10 ದಿನಗಳ ಕಾಲ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌ ಅ. 3ರಂದು ಉದ್ಘಾಟಿಸಿದರು.

ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್‌ ಕರ್ಕೇರ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್‌ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್‌ ಕುಮಾರ್‌ ಮಟ್ಟು, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಬಿ. ಅಮೀನ್‌, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾ ರಾಣಿ, ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಪ್ರಮುಖರಾದ ಸರ್ವೋತ್ತಮ ಕುಂದರ್‌, ದಿನೇಶ್‌ ಎರ್ಮಾಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕ ಸತೀಶ್‌ ಅಮೀನ್‌ ಪಡುಕೆರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
ಅ. 5ರಂದು ಬೆಳಗ್ಗೆ ಚಂಡಿಕಾ ಹೋಮ, ಶಾರದೆ ಮತ್ತು ನವದುರ್ಗೆಯರಿಗೆ ಮಂಗಳಾರತಿ, ಬೆಳಗ್ಗೆ 10.30ರಿಂದ ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ (ವಯೋಮಿತಿ : 3ರಿಂದ 9 ವರ್ಷ), ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಭಜನೆ, ಮಧ್ಯಾಹ್ನ 2ರಿಂದ ಚಿತ್ರಕಲಾ ಸ್ಪರ್ಧೆ, ಸಂಜೆ 5 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಂಜೆ 5.45ರಿಂದ 6.15ರ ತನಕ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸಂಜೆ 6.15ರಿಂದ 7.30ರ ತನಕ ಸಾಮೂಹಿಕ ಕುಣಿತ ಭಜನೆ, ರಾತ್ರಿ 7.30ರಿಂದ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.30ರಿಂದ ಬೆಂಗಳೂರು ಎಂ. ಎಸ್‌. ನಾಟ್ಯ ಕ್ಷೇತ್ರದ ಗುರು ಕೌಸಲ್ಯಾ ಶ್ರೀನಿವಾಸ್‌ ಮತ್ತು ಬಳಗದಿಂದ ಶ್ರೀ ರಾಮ ಹನುಮಂತ ನೃತ್ಯ ರೂಪಕ ನಡೆಯಲಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago