ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆ ಮಾಡಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಬಶೀರ್ ಬಂತಾ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಚಾಲಕ ಬಾಳೆಪುಣಿ ನಿವಾಸಿ ಹನೀಫ್ (44) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮೇ 21ರಂದು ಬೆಳಗ್ಗೆ ಅಕ್ರಮ ಗೋಸಾಗಾಟದ ಮಾಹಿತಿ ಪಡೆದ ಪೊಲೀಸರು ಪಂಜರಕೋಡಿ ಎಂಬಲ್ಲಿ ತೆರಳಿ ಪಿಕ್ ಅಪ್ ವಾಹನವನ್ನು ತಡೆದು ನಿಲ್ಲಿಸಿದರು. ಈ ವೇಳೆ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ ಕಾರಿನಲ್ಲಿದ್ದ ಬಶೀರ್ ಎಂಬಾತನು ಸ್ಥಳದಲ್ಲಿದ್ದ ಪೊಲೀಸರ ಪ್ರಾಣಕ್ಕೆ ಅಪಾಯವಾಗುವಂತೆ ತನ್ನ ಕಾರನ್ನು ಚಲಾಯಿಸಿಕೊಂಡು ಹೋಗಿ ಪರಾರಿಯಾದ. ಬಳಿಕ ಜಾನುವಾರು ಸಾಗಿಸುತ್ತಿದ್ದ ಪಿಕ್ ಆಫ್ ಅನ್ನು ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕ ಕಟ್ಟಿರುವುದು ಪತ್ತೆಯಾಗಿದೆ. ಈ ಬಗ್ಗೆ ಪಿಕ್ ಅಪ್ ಚಾಲಕನಲ್ಲಿ ವಿಚಾರಿಸಿದಾಗ ಯಾವುದೇ ಪರವಾನಿಗೆ ಪಡೆಯದೇ ಜಾನುವಾರುಗಳನ್ನು ವಧೆ ಮಾಡಲು ಸಾಗಿಸುತ್ತಿರುವುದಾಗಿ ತಿಳಿದು ಬಂತು. ಕೃತ್ಯಕ್ಕೆ ಬಳಸಿದ ವಾಹನ, ಎರಡು ಜಾನುವಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಚಾಲಕ ಹನೀಪ್ ಹಾಗೂ ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…