ವಿಟ್ಲ, : ಚರ್ಚ್ ನ ಧರ್ಮಗುರುವೊಬ್ಬರು ವೃದ್ಧ ದಂಪತಿಗೆ ಹಲ್ಲೆ ನಡೆಸಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತಾದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮನೇಲ ಪರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್ ನ ಪಾದ್ರಿ ನೆಲ್ಸನ್ ಒಲಿವೆರಾ ಹಲ್ಲೆ ಆರೋಪಿ ಎನ್ನಲಾಗಿದೆ. ವೃದ್ಧ ದಂಪತಿ ಮತ್ತು ಪಾದ್ರಿ ಮಧ್ಯೆ ಯಾವ ವಿಚಾರದಲ್ಲಿ ಗಲಾಟೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಹಲ್ಲೆ ಬಗ್ಗೆ ಸಂತ್ರಸ್ತ ದಂಪತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಫೆ.29ರಂದು ಈ ಘಟನೆ ನಡೆದಿರುವುದು ವೈರಲ್ ಆಗಿರುವ ಸಿಸಿಟಿವಿ ಕ್ಯಾಮರಾದ ವೀಡಿಯೊದಿಂದ ತಿಳಿದುಬರುತ್ತದೆ.
ಪಾದ್ರಿ ನೆಲ್ಸನ್ ಒಲಿವೆರಾ ಮನೆ ಆಶೀರ್ವಾದಕ್ಕೆ ತೆರಳಿದ ವೇಳೆ ಮನೆಯ ಹೊರಗೆ ವೃದ್ಧ ದಂಪತಿ ಜೊತೆ ವಾಗ್ವಾದ ನಡೆಸಿದ ಬಳಿಕ ಹಲ್ಲೆ ನಡೆಸುತ್ತಿರುವುದು ವೀಡಿಯೊದಲ್ಲಿ ಸೆರೆಯಾಗಿದೆ.
ವೀಡಿಯೊದಲ್ಲಿ ಪಾದ್ರಿಯು ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಪಟ್ಟಿ ಹಿಡಿದು ಎಳೆದೊಯ್ದು ತೀವ್ರ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪತಿಯ ರಕ್ಷಣೆಗೆ ಮುಂದಾದ ಮಹಿಳೆಗೆ ಪಾದ್ರಿ ಒದೆಯುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಹಲ್ಲೆಗೊಳಗಾದ ದಂಪತಿ ವಿಟ್ಲ ಠಾಣೆಗೆ ದೂರು ನೀಡಿದ್ದು, ವಿಚಾರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…