ವಿಟ್ಲ: ಮರ ಹಾಗೂ ವಿದ್ಯುತ್ ಕಂಬವೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಉರುಳಿಬಿದ್ದ ಘಟನೆ ವಿಟ್ಲ ಹೊರವಲಯದ ಪಡೀಬಾಗಿಲು ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ :
ಪಡೀಬಾಗಿಲು ಸಮೀಪ ರಸ್ತೆ ಬದಿಯಲ್ಲಿದ್ದ ಮರವೊಂದು ಏಕಾಏಕಿ ವಿದ್ಯುತ್ ಕಂಬದ ಮೇಲೆ ಉರುಳಿಬಿದ್ದಿದೆ. ಈ ವೇಳೆ ಅದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬ ಜೊತೆಗೆ ಉರುಳಿದೆ. ಇದೇ ವೇಳೆ ಅದೇ ರಸ್ತೆಯಾಗಿ ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರೊಂದರ ಮೇಲೆ ಈ ಮರ ಹಾಗೂ ವಿದ್ಯುತ್ ಕಂಬ ಬಿದ್ದಿದೆ. ಇದರಿಂದ ಕಾರಿನ ಮುಂಭಾಗ ಜಖಂಗೊಂಡಿದೆ.
ಘಟನೆಯ ಪರಿಣಾಮ ಕೆಲಕಾಲ ರಾಜ್ಯ ಹೆದ್ದಾರಿ ಸಂಚಾರಕ್ಕೆ ಅಡಚಣೆ ಉಂಟಾಗಿ, ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಇದನ್ನೂ ಓದಿ :
ಬಳಿಕ ಪೊಲೀಸರು, ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೆದ್ದಾರಿಯಲ್ಲಿ ಸಂಚಾರ ಪುನರ್ ಆರಂಭಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…