Featured

ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ ; ತೀವ್ರ ಆಕ್ರೋಶ – Vishwanews24

ವಿಟ್ಲ : ಛದ್ಮವೇಶದ ಮೂಲಕ ದೈವಾರಾಧನೆ ಪ್ರದರ್ಶನ – ತೀವ್ರ ಆಕ್ರೋಶ

ಬಂಟ್ವಾಳ: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ.

ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು ಚಪ್ಪಾಳೆ ಗಿಟಿಸುವುದಕ್ಕೆ ದೈವಾರಾಧಕರು ಹಾಗೂ ತುಳುನಾಡಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಖಾಸಗಿ ಶಾಲೆಯ ಬಾಲಕನೊಬ್ಬ ಕೈಯಲ್ಲಿ ದೈವದ ಆಯುಧವನ್ನು ಹಿಡಿದುಕೊಂಡು ನರ್ತಿಸುವ ಸನ್ನಿವೇಶವನ್ನು ನೆರೆದ ಪುಟ್ಟ ಮಕ್ಕಳು ಹಾಗೂ ಶಿಕ್ಷಕರು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಕೂಡಾ ಕಂಡು ಬಂದಿದೆ. ಒಟ್ಟಿನಲ್ಲಿ ಪೂಜ್ಯ ಭಾವನೆಯಿಂದ ಕಾಣಬೇಕಾದ ದೈವದ ನರ್ತನವನ್ನು ಶಾಲಾ ಕಾಲೇಜಿನ ವೇದಿಕೆಗಳಲ್ಲೂ ತಂದಿರುವುದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

11 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

11 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

12 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

12 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

12 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

12 hours ago