ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಪ್ರಥಮ ಅವಧಿಗೆ ಅಧ್ಯಕ್ಷರಾಗಿ ಕರುಣಾಕರ ನಾಯ್ತೋಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ ಪಾಣೆಮಜಲು ಆಯ್ಕೆಯಾಗಿದ್ದಾರೆ.
ವಿಟ್ಲ ಪಟ್ಟಣ ಪಂಚಾಯತ್ ಗೆ ಚುನಾವಣೆ ನಡೆದು 2 ವರ್ಷ 8 ತಿಂಗಳು ಕಳೆದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ.
ಒಟ್ಟು 18 ವಾರ್ಡ್ ಗಳಲ್ಲಿ ಬಿಜೆಪಿ ಬೆಂಬಲಿತರು 12, ಕಾಂಗ್ರೆಸ್ ಬೆಂಬಲಿತರು 5 ಮತ್ತು ಎಸ್ ಡಿಪಿ ಐ ಬೆಂಬಲಿತರು 1 ಚುನಾಯಿತರಾಗಿದ್ದರು.
ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾಗಿತ್ತು.
ಸ್ಥಾನಕ್ಕೆ ಕರುಣಾಕರ, ಉಪಾಧ್ಯಕ್ಷ ಸ್ಥಾನಕ್ಕೆ ಸಂಗೀತಾ ಪಾಣೆಮಜಲು ನಾಮಪತ್ರ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾನ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಕರುಣಾಕರ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಪದ್ಮಿನಿ ನಾಮಪತ್ರ ಸ್ಪರ್ಧಿಸಿದ್ದರು.
ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಶಾಸಕ ಸಂಜೀವ ಮಠಂದೂರು ಅವರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…