ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡಯೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್ ಶಾಕೀರ್ ಎಂಬಾತ ನೀಡಿದ ದೂರಿನಂತೆ ಕೆಲಿಂಜ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್, ಗುರುವಾರ ಕಾಲೇಜು ಮುಗಿಸಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದನೆನ್ನಲಾಗಿದ್ದು, ಇದನ್ನು ಪ್ರಶ್ನಿಸಿ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿಗೆ ಏಕಾಏಕಿಯಾಗಿ ಆರೋಪಿಗಳು ಹಾಗೂ ಇತರ 3 ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಶಾಕೀರ್ ಪೊಲೀಸರಿಗೆ ದೂರು ನೀಡಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
Join our Whatsapp group by clicking the below link 👇👇
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…