ವಿಟ್ಲ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರ ಬಂಧನ- vishwanews24
ವಿಟ್ಲ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರ ಬಂಧನ
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ಥ ಬಾಲಕ ನೀಡಿದ ದೂರಿನಂತೆ, 2026ರ ಫೆಬ್ರವರಿಯಿಂದ ಆಗಸ್ಟ್ವರೆಗಿನ ಅವಧಿಯಲ್ಲಿ ಜವಾದ್, ಶಾಹಿದ್, ರಿಯಾಝ್ ಯಾನೆ ಅಬ್ದುಲ್ ಗಫೂರ್ ಸೇರಿದಂತೆ ಆರು ಮಂದಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಲಕ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವಿಟ್ಲ ಠಾಣೆಯಲ್ಲಿ ಆರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆ 2012ರ ಕಲಂ 4(2), 5(m), 6 ಹಾಗೂ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಿಢೀರ್ ದಾಳಿ: 9 ಕೈದಿಗಳಿಂದ 10 ಮೊಬೈಲ್ ವಶ – vishwanews24
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪೈಕಿ ಜವಾದ್, ಶಹೀದ್ ಹಾಗೂ ರಿಯಾಝ್ ಯಾನೆ ಅಬ್ದುಲ್ ಗಫೂರ್ ಅವರನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಗಳನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
