ವಿಟ್ಲ: ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ನೆಲಕ್ಕುರುಳಿದ ಪರಿಣಾಮ ಸುಮಾರು ಒಂದೂವರೆ ಸಾವಿರ ಕೋಳಿಗಳು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಜು.18ರ ತಡರಾತ್ರಿ ನಡೆದಿದೆ.
ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2,200 ಕೋಳಿ ಮರಿಗಳನ್ನು ಅವರು ಸಾಕುತ್ತಿದ್ದರು. ಈ ಪೈಕಿ ಬೆಳೆದಿದ್ದ ಸುಮಾರು 700 ಕೋಳಿಗಳು ಮಾರಾಟವಾಗಿದ್ದವು.
ಶೆಡ್ಡಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಸುಮಾರು 1500 ಕೋಳಿಗಳು ಅದರಡಿಗೆ ಸಿಲುಕಿ ಸಾವನ್ನಪ್ಪಿವೆ. ಶೆಡ್ ಸಂಪೂರ್ಣ ಧ್ವಂಸಗೊಂಡಿದ್ದು, ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…