ವಿಟ್ಲ: ಕೋಣೆಯಲ್ಲಿ ಮಲಗಿದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅರವಿಂದ ಅವರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ.
ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ ಗೌಡ ಎಂಬವರು ನಿರ್ವಹಿಸುತ್ತಿದ್ದು, ಆತ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ತುಂಬಾ ಅನ್ಯೋನ್ಯವಾಗಿದ್ದ.
ಅರವಿಂದ ಭಾಸ್ಕರ ಅವರು ಅಡಿಕೆ ಮಾರಾಟ ಮಾಡಿ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದುದಲ್ಲದೇ, ಯೋಗೀಶ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು. ಇದರಿಂದ ಹೆದರಿ ರಾತ್ರಿ ವೇಳೆಯಲ್ಲಿ ಮನೆಯ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿ ಮಲಗುತ್ತಿರುವ ಬಗ್ಗೆ ಸುಮಾರು 1 ತಿಂಗಳ ಹಿಂದೆ ತಿಳಿಸಿದ್ದರು.
ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ನಿವಾಸಿ ರಘುನಾಥ ಎಂಬವರು ನೀಡಿದ ದೂರಿನ ವಿವರ ಇಂತಿದೆ: ಫೆ. 26ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ತಂದೆಯವರಿಗೆ ಕರೆ ಮಾಡಿದ ಆಶಾ, ಪತಿ ನಿನ್ನೆ ರಾತ್ರಿ 10 ಗಂಟೆಗೆ ಕೋಣೆಯಲ್ಲಿ ಮಲಗಿದ್ದು, ಬೆಳಗ್ಗಿನ ಜಾವ 7.30 ಸುಮಾರಿಗೆ ನೋಡುವಾಗ ಪತಿ ಏಳುತ್ತಿಲ್ಲ, ಮನೆಗೆ ಬನ್ನಿ ಎಂದು ತಿಳಿಸಿದ್ದಾಳೆ. ಬಳಿಕ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದ ವಿಚಾರ ತಿಳಿದು ಅಲ್ಲಿಗೆ ಹೋದಾಗ ವೈದ್ಯರು ಅರವಿಂದ ಭಾಸ್ಕರನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೃತದೇಹದ ಸ್ಥಿತಿಗತಿಯನ್ನು ಪರಿಶೀಲಿಸಿದಾಗ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…