ಬಂಟ್ವಾಳ: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಅನೀಶ್ ಅನಂತಾಡಿ (34) ಮೃತ ದುರ್ದೈವಿ.
ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡ ಅನೀಶ್ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.
ಅನೀಶ್ ಅವರು ಅನಂತಾಡಿ ಆಶ್ವತ್ತಡಿ ಮೂಲದವರು. ಅವರು ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದು, ಕುಟುಂಬದ ಸದಸ್ಯರನ್ನು ವಿಟ್ಲಕ್ಕೆ ಬಿಟ್ಟು ಬರಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…