Featured

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು – vishwanews24

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು

ಬಂಟ್ವಾಳ: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಅನೀಶ್ ಅನಂತಾಡಿ (34) ಮೃತ ದುರ್ದೈವಿ.

ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡ ಅನೀಶ್ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.

ಅನೀಶ್ ಅವರು ಅನಂತಾಡಿ ಆಶ್ವತ್ತಡಿ ಮೂಲದವರು. ಅವರು ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದು, ಕುಟುಂಬದ ಸದಸ್ಯರನ್ನು ವಿಟ್ಲಕ್ಕೆ ಬಿಟ್ಟು ಬರಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

4 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

4 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

5 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

5 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

6 hours ago