Featured

ವಿಟ್ಲ: ಯುವಕನನ್ನು ಬೆಂಕಿ ಹಾಕಿ ಸುಟ್ಟು ಹಾಕಿದ ಪ್ರಕರಣ  : ಅನೈತಿಕ ಚಟುವಟಿಕೆಗೆ ಉದ್ಯೋಗ ಅಡ್ಡಿ ಎಂದು ಕೊಲೆ – Vishwanews24

ಸುರಿಬೈಲು ನಿವಾಸಿ ಸಮಾದ್ ಶವ ಮನೆಯವರಿಗೆ ಹಸ್ತಾಂತರ

ಬಂಟ್ವಾಳ  : ಗಾಂಜ ವ್ಯಸನಿಯ ಅನೈತಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಯುವಕ ಸುರಿಬೈಲು ನಿವಾಸಿ ಸಮಾದ್ ನ ಶವವನ್ನು ಇಂದು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.ಸ್ಥಳಕ್ಕೆ ಮಂಗಳೂರು ವಿಧಿವಿಜ್ಞಾನ ಪ್ರಯೋಗಲಾಯ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್ ಆಸ್ಪತ್ರೆಯ ಮಹಾಬಲೇಶ್ವರ ಶೆಟ್ಟಿ ಹಾಗೂ ತಂಡ ಸ್ಥಳದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮನೆಯವರಿಗೆ ಶವವನ್ನು ಹಸ್ತಾಂತರ ಮಾಡಲಾಯಿತು.

ಘಟನೆಯ ವಿವರ

ಸುರಿಬೈಲು ನಿವಾಸಿ ಸಮಾದ್(19) ಕೊಲೆಯಾದ ಯುವಕನಾಗಿದ್ದು , ನ.1 ರಂದು ಈತನ ಕೊಲೆಯಾಗಿತ್ತು. ಸಾಲೆತ್ತೂರು ಸಮೀಪದ ಕಟ್ಟೆಪುನಿ ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಅವರು ಕೊಲೆ ಆರೋಪಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಯ ದೃಷ್ಟಿಯಿಂದ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವ ಅವಕಾಶಗಳಿವೆ ಎಂದು ತಿಳಿದುಬಂದಿದೆ.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : 45ಕ್ಕೂ ಹೆಚ್ಚು ಕಡೆ NIA ದಾಳಿ – Vishwanews24

ಸಮಾದ್ ಹಾಗೂ ಅದ್ರಾಮ ಇಬ್ಬರು ಸ್ನೇಹಿತರಾಗಿದ್ದು ಗಾಂಜಾ ವ್ಯಸನಿಗಳಾಗಿದ್ದಾರೆ, ಜೊತೆಗೆ ಇವರೊಳಗೆ ಅನೈತಿಕ ವ್ಯವಹಾರಗಳು ನಡೆಯುತ್ತಿದ್ದವು. ಈ ವಿಚಾರ ಮನೆಯವರಿಗೆ ಗೊತ್ತಾಗಿ ಬಳಿಕ ಸಮಾದ್ ನನ್ನು ಉದ್ಯೋಗಕ್ಕಾಗಿ ಬೆಂಗಳೂರಿಗೆ ಕಳುಹಿಸಿದ್ದರು. ಗಾಂಜಾ ವ್ಯಸನದ ಜೊತೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸಮಾದ್ ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೋಗುವುದು ಅದ್ರಾಮನಿಗೆ ಇಷ್ಟವಿರಲಿಲ್ಲ. ಹಾಗಾಗಿ ಹೋಗುವದಕ್ಕೆ ಅನೇಕ ಬಾರಿ ವಿರೋಧ ವ್ಯಕ್ತಪಡಿಸಿದ್ದ ಎಂದು ಹೇಳಲಾಗಿದೆ‌. ಈ ಮಧ್ಯೆ ಅದ್ರಾಮ ಸಮಾದ್ ನನ್ನು ಊರಿಗೆ ಬರುವಂತೆ ಒತ್ತಾಯಿಸಿದ್ದು, ನ. 1 ರಂದು ಊರಿಗೆ ಬಂದಿದ್ದ ಸಮಾದ್ ಹಾಗೂ ಅದ್ರಾಮ ಇಬ್ಬರು ಸೇರಿ ಇರಾ ಜನನಿಬಿಡ ಗುಡ್ಡವೊಂದಕ್ಕೆ ಅದ್ರಾಮನ ರಿಕ್ಷಾದಲ್ಲಿ ಹೋಗಿದ್ದರು.
ಅರೋಪಿ ಪ್ರಾಥಮಿಕ ತನಿಖೆಯ ವೇಳೆ ಹೇಳಿದಂತೆ ಇಬ್ಬರು ಗಾಂಜಾ ಸೇವಿಸಿದ ಬಳಿಕ ಈತ ಬೆಂಗಳೂರಿಗೆ ತೆರಳದಂತೆ ಇವರಿಬ್ಬರ ಮಧ್ಯೆ ಜಗಳ ಆಗಿದೆ.
ಬಳಿಕ ಇಬ್ಬರೂ ‌ಗುಡ್ಡೆಯಲ್ಲಿ ಮಲಗಿದ್ದರು. ಅ ಸಂದರ್ಭದಲ್ಲಿ ಅದ್ರಾಮ ರಿಕ್ಷಾದಲ್ಲಿ ಇರಿಸಿದ್ದ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ತನಿಖೆ ವೇಳೆ ಬಹಿರಂಗ ವಾಗಿದೆ ಎಂದು ಹೇಳಲಾಗಿದೆ.

ಈ ವಿಚಾರವನ್ನು ಅದ್ರಾಮ ಅವರ ಸಂಬಂಧಿಯೊರ್ವನಿಗೆ ತಿಳಿಸಿದ ಕಾರಣ ಕೊಲೆ ವಿಚಾರ ಬಹಿರಂಗ ವಾಗಿದೆ. ಅವರೆಗೆ ಅದ್ರಾಮನ ಮನೆಯವರು ಈತ ಬೆಂಗಳೂರಿಗೆ ತೆರಳಿದ್ದಾನೆ ಎಂಬುದೇ ನಂಬಿಕೆಯಾಗಿತ್ತು.

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ : 45ಕ್ಕೂ ಹೆಚ್ಚು ಕಡೆ NIA ದಾಳಿ – Vishwanews24

ಘಟನಾ ಸ್ಥಳದಲ್ಲಿ ಶವದ ಪರೀಕ್ಷೆ ನಡೆದಿದ್ದು, ಸ್ಥಳದಲ್ಲಿ ಅಡಿಸನಲ್ ಎಸ್.ಪಿ.ಕುಮಾರ್ ಚಂದ್ರ, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ‌.ಡಿ. ನಾಗರಾಜ್ , ಎಸ್.ಐ.ಹರೀಶ್ ಹಾಗೂ ಸಿಬ್ಬಂದಿ ಗಳು ಹಾಜರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago