Featured

ವಿಟ್ಲ: ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ ; ಅಸಮಧಾನದಿಂದ ಸಭೆಯಲ್ಲೇ ದಿಕ್ಕಾರ ಕೂಗಿದ ಕಾರ್ಯಕರ್ತರು – Vishwanews24

ವಿಟ್ಲ: ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ ; ಬಿಜೆಪಿಯಲ್ಲಿ ಅಸಮಧಾನ –  ಸಭೆಯಲ್ಲೇ ದಿಕ್ಕಾರ ಕೂಗಿದ ಕಾರ್ಯಕರ್ತರು – Vishwanews24

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ ವೇಳೆ ಅವರ ಗ್ರಾಮದ ಬಿಜೆಪಿ ಕಾರ್ಯಕರ್ತರೆ ದಿಕ್ಕಾರ ಕೂಗಿದ ಘಟನೆ ನಡೆಯಿತು.

ಕಬಕದಲ್ಲಿ ಪುತ್ತೂರು ಗ್ರಾಮಾಂತರ ಬಿಜೆಪಿ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ರಾಜೇಶ್ ಬಾಳೆಕಲ್ಲುರವರು ಬಿಜೆಪಿ ಸೇರ್ಪಡೆಗೊಂಡರು.

ರಾಜೇಶ್ ಬಾಳೆಕಲ್ಲು ಅವರನ್ನು ಈ ಹಿಂದೆ ಕಾಂಗ್ರೆಸ್ ಪಕ್ಷ ಉಚ್ಚಾಟಿಸಿತ್ತು. ಅಶೋಕ್ ಶೆಟ್ಟಿ ಮತ್ತು ರಾಜೇಶ್ ಕುಮಾರ್ ಅವರು ಕೆಲಸಮಯಗಳಿಂದ ಬಿಜೆಪಿಯಲ್ಲಿ ಕಾಣಿಸಿಕೊಂಡಿದ್ದರು. ಇಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ, ವಿಧಾನ ಪರಿಷತ್ ಅಭ್ಯರ್ಥಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ರಾಜೇಶ್ ಬಾಳೆಕಲ್ಲು ಬಿಜೆಪಿ ಬರುವುದು ಮಾಣಿಲದ ಹಿರಿಯ ಬಿಜೆಪಿ ಕಾರ್ಯಕರ್ತರಿಗೆ ವಿರೋಧವಿತ್ತು. ರಾಜೇಶ್ ಬಾಳೆಕಲ್ಲುರವರನ್ನು ಬಿಜೆಪಿಗೆ ಸೇರಿಸುವ ವಿಚಾರಕ್ಕೆ ಸಂಬಂದಿಸಿ ಅಲ್ಲಿನ ಬಿಜೆಪಿ ಕಾರ್ಯಕರ್ತರು ತೀವ್ರವಿರೋಧ ವ್ಯಕ್ತಪಡಿಸಿದ್ದರು. ಆದರೆ ಅವರ ಮಾತನ್ನು ಗಣನೆಗೆ ತೆಗೆದುಕೊಳ್ಳದೆ ಕಾರ್ಯಕ್ರಮದಲ್ಲಿ ಹಿರಿಯರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳಿಸರುವುದು ಹಿರಿಯ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರಿಂದಾಗಿ ಅವರು ಪಕ್ಷ ಸೇರ್ಪಡೆ ವೇಳೆ ರಾಜೇಶ್ ಕುಮಾರ್ ಬಾಳೆಕಲ್ಲುರವರಿಗೆ ದಿಕ್ಕಾರ ಕೂಗಿದರು.

 

Vishwa News 24

Recent Posts

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

21 minutes ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

26 minutes ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

31 minutes ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ – vishwanews24

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…

40 minutes ago

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ – vishwanews24

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…

54 minutes ago

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…

59 minutes ago