ವಿಟ್ಲ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡ ಕಾರು – vishwanews24

Featured, ದಕ್ಷಿಣ ಕನ್ನಡ

ವಿಟ್ಲ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಢಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು

ವಿಟ್ಲ: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ – vishwanews24

 

ಬೆಳಗಿನ ಜಾವ ಅತೀವೇಗದಿಂದ ಬಂದ ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಶಾಶ್ವತ ತಡೆಬೇಲಿಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ನಿರ್ಮಾಣ ಕಾರ್ಯದ ಬಗ್ಗೆ ಸಾರ್ವಜನಿಕರು ಇದನ್ನು ವೇಗವಾಗಿ ಬರುವ ಗಾಡಿಗಳು ಸೀಳಿಕೊಂಡು ಹೋಗಬಹುದು ಎಂದು ಮಾತಾಡಿಕೊಂಡಿದ್ದರು. ಉತ್ತಮ ಗುಣಮಟ್ಟದ ಕಾಂಕ್ರೀಟ್ ಬೇಲಿ ನಿರ್ಮಿಸಬಹುದಿತ್ತು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿರುವಾಗಲೇ ಅಪಘಾತ ಸಂಭವಿಸಿರುವುದು ಸ್ಪಷ್ಟ ನಿದರ್ಶನವಾಗಿದೆ.

ಮಂಗಳೂರು: ಚಿಕಿತ್ಸೆಗೆಂದು ಕರೆದುಕೊಂಡು ಬಂದು ಆಸ್ಪತ್ರೆಯಲ್ಲೇ ಯುವತಿ ಮೇಲೆ ನಿರಂತರ ಅತ್ಯಾಚಾರ – vishwanews24

Leave a Reply