ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಅಪಘಾತ ಸಂಭವಿಸಿ, ಟಿಪ್ಪರ್ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾನೂನು ಪ್ರಕ್ರಿಯೆ ಮುಂದುವರೆದಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…