ವಿಟ್ಲ :  ಶಾಲೆಗೆ ತೆರಳಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕಿಗೆ ಬೈಕ್ ಡಿಕ್ಕಿ  ; ಗಂಭೀರ ಗಾಯ- Vishwanews24

Featured, ದಕ್ಷಿಣ ಕನ್ನಡ

ವಿಟ್ಲ :  ಶಾಲೆಗೆ ತೆರಳಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕಿಗೆ ಬೈಕ್ ಡಿಕ್ಕಿ  ; ಗಂಭೀರ ಗಾಯ

ವಿಟ್ಲ :  ಶಾಲೆಗೆ ಹೊರಟ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ.

ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ(5) ಗಾಯಗೊಂಡ ವಿದ್ಯಾರ್ಥಿನಿ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲೆಗೆ ತೆರಳಲೆಂದು ಮನೆ ಸಮೀಪದ ರಸ್ತೆ ಬದಿಯಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಳು. ಈ ವೇಳೆ ವಿಟ್ಲ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದ ಬಾಲಕಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು :  ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ : ನಳಿನ್ ಲವ್ ಜಿಹಾದ್ ಹೇಳಿಕೆಗೆ ಯು.ಟಿ ಖಾದರ್‌  – Vishwanews24

 

Leave a Reply