ವಿಟ್ಲ: ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.
ಮೃತಪಟ್ಟ ಶಿಕ್ಷಕಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಕಸಬ ಗ್ರಾಮದ ಸಿಪಿಸಿಆರ್‌ಐ ಬಳಿಯ ನಿವಾಸಿ ಪ್ರಿಯಾ ಕುಮಾರಿ (38) ಎಂದು ಗುರುತಿಸಲಾಗಿದೆ.
ಸುಮಾರು 12 ವರ್ಷಗಳಿಂದ ಪುತ್ತೂರಿನ ಹಾರಾಶಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಅವರು ವಾರದ ಹಿಂದೆಯಷ್ಟೆ ಪಾಪೆಮಜಲು ಸರಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿದ್ದರು.
ಕೆಲಸದ ಒತ್ತಡದಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದು ಮನೆಯಲ್ಲಿರುವಾಗ ಆಗಾಗ ನನಗೆ ಕರ್ತವ್ಯದ ಒತ್ತಡ ಜಾಸ್ತಿಯಾಗಿದೆ ಎಂದು ಹೇಳುತ್ತಿದ್ದರು. ಡಿಸೆಂಬರ್ 13ರಂದು ಬೆಳಗ್ಗೆ ಅಳಿಯ ರಮೇಶ ಕರೆ ಮಾಡಿ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದು, ನಾನು ಅವರ ಮನೆಗೆ ತೆರಳಿ ನೋಡಿದಾಗ ಮಗಳು ಮನೆಯ ಒಳಗಿರುವ ಕೋಣೆಯೊಂದರ ಕಿಟಕಿಯ ಮೇಲ್ಚಾವಣಿಗೆ ಚೂಡಿದಾರದ ಶಾಲಿನಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು, ಅಲ್ಲಿಂದ ತಕ್ಷಣ ಕೆಎಂಸಿ ಆಸ್ಪತ್ರೆಗೆ ದಾಖಲಿದ್ದು, ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಮೃತರ ತಂದೆ ಗಣಪ ಪೂಜರಿಯವರು ವಿಟ್ಲ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಮೃತರು ನಿವೃತ್ತ ಯೋಧ ರಮೇಶ್ ಬಿ.ಕೆ, ಪುತ್ರಿಯರಾದ ವಂಶಿ, ದೃಷ್ಟಿ ಮತ್ತು ತಂದೆ ಗಣಪ ಪೂಜಾರಿ ಹಾಗೂ ತಾಯಿ ಜಯಂತಿ ಅವರನ್ನು ಅಗಲಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…