ಬೆಂಗಳೂರು : ಉನ್ನತ ವ್ಯಾಸಂಗ, ನೌಕರಿ, ಒಲಿಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವವರಿಗಾಗಿ ಕೋವಿಡ್ ಲಸಿಕೆ ಮೊದಲ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ನೀಡಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಸದ್ಯ ಕೋವಿಶೀಲ್ಡ್ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದವರು 84 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕೆಂಬ ನಿಯಮವಿದೆ. ಈ ನಿಯಮದಿಂದ ವಿದೇಶಕ್ಕೆ ತೆರಳುವವರಿಗೆ ತೊಂದರೆಯಾಗಿತ್ತು. ಹೀಗಾಗಿ ಈ ಆದೇಶದ ಬಳಿಕ ಮೊದಲ ಡೋಸ್ ಪಡೆದ 28 ದಿನಗಳ ಎರಡನೇ ಡೋಸ್ ಪಡೆಯಬಹುದಾಗಿದೆ.
ಸ್ವಯಂ ಘೋಷಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಯು ನೀಡುವ ಮಾಹಿತಿಯನ್ನು ಪಡೆದು, ದಾಖಲೆಗಳನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಬೇಕು. ಈ ಪತ್ರವನ್ನು ಕೋವಿನ್ ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡಬೇಕು. ಇನ್ನು ವಿದೇಶಕ್ಕೆ ತೆರಳುವವರು ಮೊದಲ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್ ಪೋರ್ಟ್ ನಂಬರ್ ಅಥವಾ ಇತರ ಮಾಹಿತಿ ನೀಡದಿದ್ದಾರೆ, ಎರಡನೇ ಡೋಸ್ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಲಸಿಕೆ ಪ್ರಮಾಣಪತ್ರವನ್ನು ಒದಗಿಸಬೇಕು ಎಂದು ಇಲಾಖೆ ಸೂಚಿಸಿದೆ
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…