ವಿದೇಶಕ್ಕೆ ಪದವಿ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ  ಶಿಕ್ಷಣ ಸಾಲ 30 ಲಕ್ಷ ಹೆಚ್ಚಳಕ್ಕೆ ಚಿಂತನೆ : ಸಚಿವ ಜಮೀರ್ ಅಹ್ಮದ್ – Vishwanews24

Featured, ರಾಜ್ಯ ನ್ಯೂಸ್

ವಿದೇಶಕ್ಕೆ ಪದವಿ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ  ಶಿಕ್ಷಣ ಸಾಲ 30 ಲಕ್ಷಕ್ಕೆ ಹೆಚ್ಚಳ ಚಿಂತನೆ : ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಕರ್ನಾಟಕದಿಂದ ವಿದೇಶಕ್ಕೆ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಶೈಕ್ಷಣಿಕ ಸಾಲವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ ಮಾಡೋ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡ ಬಯಸಿದರೆ ಪ್ರಸ್ತುತ 20 ಲಕ್ಷ ರೂ. ಶಿಕ್ಷಣ ಸಾಲ ನೀಡಲಾಗುತ್ತಿದ್ದು, ಇದೀಗ ಎನ್‌ಎಂಡಿಸಿ ನೆರವಿನೊಂದಿಗೆ ಹತ್ತು ಲಕ್ಷ ಹೆಚ್ಚುವರಿ ಯಾಗಿ ಒಟ್ಟು 30 ಲಕ್ಷ ರೂ.ಸಾಲ ಸೌಲಭ್ಯ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಚಂದ್ರಯಾನ-3 ಬಗ್ಗೆ ಟ್ವಿಟ್ ಮಾಡಿ ವ್ಯಂಗ್ಯ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು – Vishwanews24

ಹಳೇ ಯೋಜನೆ ಮತ್ತೆ ಆರಂಭಿಸಲಾಗಿದೆ. ನಾಲ್ಕು ಹೊಸ ಯೋಜನೆ ಪ್ರಾರಂಭಿಸಲಾಗುತ್ತಿದೆ. ನಿರುದ್ಯೋಗಿ ಗಳಿಗೆ ಕಾರು ಸೇರಿ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡುವ ಸ್ವಾವಲಂಬಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಶ್ರಮಶಕ್ತಿ, ವಿಧವೆ, ವಿಚ್ಚೆಧಿತ, ಅವಿವಾಹಿತ ಮಹಿಳೆಯರಿಗೆ 50 ಸಾವಿರ ಸಾಲ ನೀಡುವ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದರು.

Leave a Reply