ಬೆಂಗಳೂರು: ಕರ್ನಾಟಕದಿಂದ ವಿದೇಶಕ್ಕೆ ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಶೈಕ್ಷಣಿಕ ಸಾಲವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಳ ಮಾಡೋ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡ ಬಯಸಿದರೆ ಪ್ರಸ್ತುತ 20 ಲಕ್ಷ ರೂ. ಶಿಕ್ಷಣ ಸಾಲ ನೀಡಲಾಗುತ್ತಿದ್ದು, ಇದೀಗ ಎನ್‌ಎಂಡಿಸಿ ನೆರವಿನೊಂದಿಗೆ ಹತ್ತು ಲಕ್ಷ ಹೆಚ್ಚುವರಿ ಯಾಗಿ ಒಟ್ಟು 30 ಲಕ್ಷ ರೂ.ಸಾಲ ಸೌಲಭ್ಯ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಹಳೇ ಯೋಜನೆ ಮತ್ತೆ ಆರಂಭಿಸಲಾಗಿದೆ. ನಾಲ್ಕು ಹೊಸ ಯೋಜನೆ ಪ್ರಾರಂಭಿಸಲಾಗುತ್ತಿದೆ. ನಿರುದ್ಯೋಗಿ ಗಳಿಗೆ ಕಾರು ಸೇರಿ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡುವ ಸ್ವಾವಲಂಬಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಶ್ರಮಶಕ್ತಿ, ವಿಧವೆ, ವಿಚ್ಚೆಧಿತ, ಅವಿವಾಹಿತ ಮಹಿಳೆಯರಿಗೆ 50 ಸಾವಿರ ಸಾಲ ನೀಡುವ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…