ಕುಟುಂಬದ ವಾರ್ಷಿಕ ಆದಾಯ ಗರಿಷ್ಟ 8 ಲಕ್ಷ ರೂ. ಇರುವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ.
ಬೆಂಗಳೂರು: ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆ ರಾಜ್ಯ ಸರಕಾರ ಜಾರಿಗೆ ತಂದಿದ್ದು, ಈ ಮೂಲಕ ವಿದೇಶದಲ್ಲಿ ವ್ಯಾಸಂಗ ಮಾಡುವ ಕನಸು ಕಂಡಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಬುದ್ಧ ಯೋಜನೆ ಯನ್ನು ವಿಧಾನಸೌಧದಲ್ಲಿ ಇಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ವಿದ್ಯಾರ್ಥಿ ವೇತನ ಪಡೆದು ನಾನು ಸಂಶೋಧನೆ ಮಾಡಿ ಆಸ್ಟ್ರೇಲಿಯಾದಲ್ಲಿ ಪಿಎಚ್ಡಿ ಪದವಿ ಪಡೆದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೂಡ ವಿದ್ಯಾರ್ಥಿ ವೇತನ ಪಡೆದು ವಿದೇಶದಲ್ಲಿ ವ್ಯಾಸಂಗ ಮಾಡಿ ಸಂವಿಧಾನ ರಚನೆ ಮಾಡಿದರು. ಹಿಂದುಳಿದವರಿಗೆ ಉನ್ನತ ಮಟ್ಟದ ಶಿಕ್ಷಣ ಕೊಡಿಸುವ ಉದ್ದೇಶದಿಂದ ಸರ್ಕಾರ ಪ್ರಬುದ್ಧ ಯೋಜನೆ ಜಾರಿಗೆ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಭಾಗವಹಿಸಿದ್ದರು.’
ಕುಟುಂಬದ ವಾರ್ಷಿಕ ಆದಾಯ ಗರಿಷ್ಟ 8 ಲಕ್ಷ ರೂ. ಇರುವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ. 8-15 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಹಣವನ್ನು ಸರ್ಕಾರ ಭರಿಸುತ್ತದೆ. 15 ಲಕ್ಷ ರೂ. ಮೇಲ್ಪಟ್ಟ ಆದಾಯ ಇರುವ ವಿದ್ಯಾರ್ಥಿಗಳಿಗೆ ಶೇ.33 ಹಣ ಸಹಾಯ ಮಾಡಲಾಗುತ್ತದೆ. ಪ್ರಬುದ್ಧ ಯೋಜನೆಯಲ್ಲಿ ವಿಕಲಚೇತನರಿಗೆ ಶೇ.4 ಹಾಗೂ ವಿದ್ಯಾರ್ಥಿನಿಯರಿಗೆ ಶೇ.33 ಮೀಸಲಾತಿ ಸಿಗಲಿದೆ.
ವಿಮಾನಯಾನ ವೆಚ್ಚ ಭರಿಸಲಾಗುವುದು ಈ ಯೋಜನೆಯೊಂದಿಗೆ ಅಂಬೇಡ್ಕರ್ ಕನಸಿನಂತೆ ಪ್ರಭುದ್ಧ ಭಾರತ ನನಸು ಮಾಡಲು ಮುಂದಾಗಿದ್ದೇವೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…