ಮಂಗಳೂರು: ವಿದೇಶದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಗಾ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಬೆಡ್ ಗಳ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ.
ರಾಜ್ಯ ಸರ್ಕಾರ ಸೂಚನೆಯಂತೆ ರೋಗ ಲಕ್ಷಣವಿದ್ದವರು ಪತ್ತೆಯಾದರೆ ಐಸೋಲೇಶನ್ ಮಾಡಲು ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ. ಅಲ್ಲದೆ ಕಳೆದ 21 ದಿನಗಳಲ್ಲಿ , ಅಮೇರಿಕಾ, ಇಂಗ್ಲೆಂಡ್ , ಬ್ರಝಿಲ್ , ಮೊದಲಾದ ದೇಶಗಳಿಂದ ಬಂದವರ ಮಾಹಿತಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅಲ್ಲದೆ ವಿದೇಶಗಳಿಂದ ಆಗಮಿಸುವವರಲ್ಲಿ ರೋಗ ಲಕ್ಷಣಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಲಾಖೆ ಅಧಿಕಾರಿ , ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಇದುವರೆಗೆ ದೇಶದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ. ಮುಖ ಹಾಗೂ ಮೈಮೇಲೆ ನೀರು ತುಂಬಿದ ಗುಳ್ಳೆಗಳಿರುವುದು ಮಂಕಿಫಾಕ್ಸ್ ನ ಮುಖ್ಯ ಲಕ್ಷಣ ಎಂದು ಅವರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…