Featured

ವಿದೇಶ ಪ್ರವಾಸಕ್ಕೆ ಹೋಗಲು ಮಗಳಿಂದ ಕಿಡ್ನಾಪ್ ನಾಟಕ : ತಂದೆಯ ಬಳಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಆಘಾತಕಾರಿ ಘಟನೆ – Vishwanews24

ವಿದೇಶ ಪ್ರವಾಸಕ್ಕೆ ಹೋಗಲು ಮಗಳಿಂದ ಕಿಡ್ನಾಪ್ ನಾಟಕ : ತಂದೆಯ ಬಳಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಆಘಾತಕಾರಿ ಘಟನೆ ; ಸತ್ಯಾಸತ್ಯತೆ ತಿಳಿದ ಪೋಷಕರು ಶಾಕ್ !

ಮಧ್ಯಪ್ರದೇಶ: ವಿದೇಶ ಪ್ರವಾಸಕ್ಕೆ ಹೋಗಲು 21 ವರ್ಷದ ಯುವತಿಯೊಬ್ಬಳು ಅಪಹರಣದ ನಾಟಕವಾಡಿ ತಂದೆಯ ಬಳಿ ಮೂವತ್ತು ಲಕ್ಷಕ್ಕೆ ಬೇಡಿಕೆ ಇಟ್ಟ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಘಟನೆಯ ಸತ್ಯಾಸತ್ಯತೆ ತಿಳಿದ ಪೋಷಕರು ಶಾಕ್ ಗೆ ಒಳಗಾಗಿದ್ದಾರೆ.

ಏನಿದು ಪ್ರಕರಣ: ಮಧ್ಯಪ್ರದೇಶದ 21 ವರ್ಷದ ಯುವತಿ ಕಾವ್ಯ ತನ್ನ ಪೋಷಕರ ಬಳಿ ನೀಟ್ ಪರೀಕ್ಷಾ ತಯಾರಿ ನಡೆಸುವುದಾಗಿ ತನ್ನ ತಾಯಿಯ ಜೊತೆ ರಾಜಸ್ಥಾನದ ಕೋಟಕ್ಕೆ ಬಂದು ಅಲ್ಲಿನ ಹಾಸ್ಟೆಲ್ ನಲ್ಲಿ ತಂಗಿದ್ದಳು ಇದಾದ ಬಳಿಕ ತಾಯಿ ಊರಿಗೆ ಮರಳಿದ್ದಾರೆ ಆದರೆ ಕಾವ್ಯ ನೀಟ್ ಪರೀಕ್ಷೆಯ ತಯಾರಿ ನಡೆಸುವ ಬದಲು ಹಾಸ್ಟೆಲ್ ನಲ್ಲಿ ಕೇವಲ ಮೂರೂ ದಿನಗಳ ಕಾಲ ಮಾತ್ರ ಇದ್ದು ಬಳಿಕ ಸ್ನೇಹಿತರೊಂದಿಗೆ ಇಂದೋರ್ ಗೆ ತೆರಳಿದ್ದಾಳೆ ಅಲ್ಲಿ ತನ್ನ ಸ್ನೇಹಿತರ ಜೊತೆ ಉಳಿದುಕೊಂಡು ಆರಾಮದ ಜೀವನ ನಡೆಸುತ್ತಿದ್ದಳು ಇದಾದ ಬಳಿಕ ತನ್ನ ಸ್ನೇಹಿತರ ಜೊತೆಗೆ ವಿದೇಶಕ್ಕೆ ಪ್ರವಾಸ ಹೋಗುವ ಪ್ಲಾನ್ ಮಾಡಿದ್ದಾಳೆ ಆದರೆ ವಿದೇಶಕ್ಕೆ ಹೋಗಲು ಹೆಚ್ಚಿನ ಹಣದ ಅವಶ್ಯಕತೆ ಇದ್ದುದರಿಂದ ಆಕೆ ಮತ್ತು ಆಕೆಯ ಸ್ನೇಹಿತರು ಸೇರಿ ಅಪಹರಣದ ನಾಟವಾಡುವ ವಿಚಾರಕ್ಕೆ ಬಂದಿದ್ದಾರೆ.

ಅದರಂತೆ ಕಾವ್ಯ ತನ್ನನ್ನು ಹಗ್ಗದಿಂದ ಕಟ್ಟಿದ ರೀತಿಯಲ್ಲಿ ಫೋಟೋ ತೆಗೆದು ತನ್ನ ತಂದೆ ರಘುವೀರ್ ಧಕಡ್ ಅವರ ವಾಟ್ಸ್ ಆಪ್ ಗೆ ಕಳುಹಿಸಿದ್ದಾಳೆ ಅಲ್ಲದೆ ನಿಮ್ಮ ಮಗಳು ಅಪಹರಣವಾಗಿದ್ದಾಳೆ ಆಕೆಯನ್ನು ವಾಪಸು ಕಳುಹಿಸಬೇಕಾದರೆ ನಮಗೆ 30 ಲಕ್ಷ ಹಣ ನೀಡಬೇಕು ಎಂದು ಮೆಸೇಜ್ ಕಳುಹಿಸಿದ್ದಾರೆ.
ಇತ್ತ ವಾಟ್ಸ್ ಆಪ್ ನೋಡಿದ ಕಾವ್ಯ ತಂದೆಗೆ ಒಮ್ಮೆ ಆಘಾತವಾಗಿದೆ ಕಲಿಯಲು ಹೋದ ತನ್ನ ಮಗಳನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದುಕೊಂಡು ಸೀದಾ ಮಧ್ಯಪ್ರದೇಶದಲ್ಲಿರುವ ಪೊಲೀಸ್ ಠಾಣೆಗೆ ತೆರಳಿ ತನ್ನ ಮಗಳು ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಈ ವಿಚಾರವನ್ನು ರಾಜಸ್ಥಾನದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ ಕೂಡಲೇ ಅಲರ್ಟ್ ಆದ ರಾಜಸ್ಥಾನ ಪೊಲೀಸರು ಆಕೆಯ ಪತ್ತೆಗೆ ಬಲೆ ಬಿಸಿದ್ದಾರೆ ಅಲ್ಲದೆ ಆಕೆ ವಾಸವಿದ್ದ ಹಾಸ್ಟೆಲ್ ಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ ಆಗ ಆಕೆ ಹಾಸ್ಟೆಲ್ ಬಿಟ್ಟಿರುವುದು ಬೆಳಕಿಗೆ ಬಂದಿದೆ, ಇದಾದ ಬಳಿಕ ಪೊಲೀಸರು ಎಲ್ಲಾ ಕಡೆಯ ಸಿಸಿ ಕ್ಯಾಮೆರಾ ಪರಿಶೀಲಿಸಿದ ವೇಳೆ ಅಪಹರಣವಾಗುವ ಮೂರೂ ಗಂಟೆಯ ಮೊದಲು ಜೈಪುರದ ದುರ್ಗಾಪುರದಲ್ಲಿರುವ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾಳೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆಕೆಯ ಸ್ನೇಹಿತರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದ ವೇಳೆ ಸತ್ಯ ಬಾಯಿ ಬಿಟ್ಟಿದ್ದಾರೆ, ಅಲ್ಲದೆ ಆಕೆ ಮತ್ತು ಆಕೆಯ ಗೆಳೆಯ ವಿದೇಶಕ್ಕೆ ತಿರುಗಾಡಲು ಹೋಗುವ ಉದ್ದೇಶದಿಂದ ಅಪಹರಣದ ನಾಟಕವಾಡಿ ಮೂವತ್ತು ಲಕ್ಷಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವ ಪ್ಲಾನ್ ಮಾಡಿದ್ದರು ಎಂದು ಸತ್ಯ ಒಪ್ಪಿಕೊಂಡಿದ್ದಾನೆ

 

ಈ ವಿಚಾರ ಪೋಷಕರು ತಿಳಿಯುತ್ತಿದ್ದಂತೆ ದಂಗಾಗಿದ್ದಾರೆ, ತಮ್ಮ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಪಡೆಯಲಿ ಎಂದು ಪೋಷಕರು ಹಣ ಕೂಡಿಟ್ಟು ತಮ್ಮ ಅಗತ್ಯಗಳನ್ನು ಬದಿಗಿಟ್ಟು ಮಕ್ಕಳ ಬೇಕು ಬೇಡಗಳನ್ನು ಈಡೇರಿಸುವ ಪೋಷಕರಿಗೆ ಮಕ್ಕಳು ಈ ರೀತಿ ಮಾಡುತ್ತಿರುವುದು ವಿಪರ್ಯಾಸವೇ ಸರಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago