Featured

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಅರ್ಜಿ ಸಲ್ಲಿಸಲು ಸೂಚನೆ – vishwanews24

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್..

ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ  ಉಚಿತ ಬಸ್ ಪಾಸ್  ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್  ಅವರು ಈ ಯೋಜನೆಯನ್ನು ಘೋಷಿಸಿದ್ದಾರೆ.

ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:

ಎಲ್ಲಾ ಮಕ್ಕಳಿಗೂ ಸೌಲಭ್ಯ
ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅದರಂತೆ ಮುಖ್ಯಮಂತ್ರಿಗಳು ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದರು.

ಕರ್ನಾಟಕ ಒನ್, ಬೆಂಗಳೂರು ಒನ್‌ನಲ್ಲಿ ಅರ್ಜಿ
ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್‌ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಪಾವತಿಸಿರುವ ಹಣ ವಾಪಸ್
ಈಗಾಗಲೇ ಹಣ ಪಾವತಿ ಮಾಡಿ ಬಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ವಾಪಸ್ ನೀಡಲಾಗುವುದು. ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

4 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

4 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

5 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

6 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

9 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

9 hours ago