ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಘೋಷಿಸಿದ್ದಾರೆ.
ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:
ಎಲ್ಲಾ ಮಕ್ಕಳಿಗೂ ಸೌಲಭ್ಯ
ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅದರಂತೆ ಮುಖ್ಯಮಂತ್ರಿಗಳು ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದರು.
ಕರ್ನಾಟಕ ಒನ್, ಬೆಂಗಳೂರು ಒನ್‌ನಲ್ಲಿ ಅರ್ಜಿ
ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್‌ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಪಾವತಿಸಿರುವ ಹಣ ವಾಪಸ್
ಈಗಾಗಲೇ ಹಣ ಪಾವತಿ ಮಾಡಿ ಬಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ವಾಪಸ್ ನೀಡಲಾಗುವುದು. ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…
260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…