ನವದೆಹಲಿ: ಹಿಂದಿ ಭಾಷೆ ಕಲಿಕೆ ಕಡ್ಡಾಯ ಎಂದು ಕೇಂದ್ರ ಸರ್ಕಾರ ನಿರ್ಧರಿಸಿದಾಗಿನಿಂದ ಹಲವು ರಾಜ್ಯಗಳಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದ ಬೆನ್ನಲ್ಲೇ ಇದೀಗ ಎಂದು ಕೇಂದ್ರ ಸರ್ಕಾರ ಹಿಂದಿ ಕಡ್ಡಾಯ ಅಲ್ಲ ಎಂದು ಹೇಳಿದೆ. ಈ ಮೂಲಕ ರಾಜ್ಯಗಳಿಗಿದ್ದ ಆತಂಕವನ್ನು ದೂರ ಮಾಡಿದೆ.
ಈ ಮೊದಲು ಸ್ಥಳೀಯ ಭಾಷೆಗಳ ಜೊತೆಗೆ ಹಿಂದಿ ಕಡ್ಡಾಯ ಎನ್ನಲಾಗಿತ್ತು. ಆದರೆ ಹಿಂದಿ ಭಾಷೆ ಹೇರಿಕೆಗೆ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ವಿರೋಧದ ಹಿನ್ನೆಲೆ ಕರಡು ನೀತಿಯಲ್ಲಿ ಕೇಂದ್ರ ಸರ್ಕಾರ ಬದಲಾವಣೆ ಮಾಡಿದೆ ಎನ್ನಲಾಗಿದೆ.
ಇದರಿಂದಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಹಿಂದಿ ಭಾಷಾ ಕಡ್ಡಾಯ ಹೇರಿಕೆ ವಿರುದ್ಧ ಎತ್ತಿದ್ದ ಹೋರಾಟದ ಧ್ವನಿಗೆ ಜಯ ಲಭಿಸಿದಂತಾಗಿದೆ.
ಕೇಂದ್ರ ಸರ್ಕಾರ ಇಂದು ಬೆಳಿಗ್ಗೆ ಈ ಸಂಬಂಧ ಸ್ಪಷ್ಟನೆ ನೀಡಿದ್ದು, ಆಯಾ ರಾಜ್ಯಗಳಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ, ಶಿಕ್ಷಣ ವ್ಯವಸ್ಥೆ ಈ ಹಿಂದೆ ಇದ್ದ ರೀತಿಯಲ್ಲಿಯೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದೆ.
ಇನ್ನು ಯಾರ ಮೇಲೂ ಯಾವುದೇ ಭಾಷೆ ಹೇರುವ ಉದ್ದೇಶ ಸರ್ಕಾರಕ್ಕಿಲ್ಲ. ಹೊಸ ಶಿಕ್ಷಣ ನೀತಿ ಕುರಿತ ವರದಿಯನ್ನು ಮಾತ್ರ ಸಲ್ಲಿಸಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…