ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲ : ಕೃಷ್ಣಮೂರ್ತಿ ಆಚಾರ್ಯ ಖಂಡನೆ – vishwanews24
ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ
ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿದೆ
ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷ್ಣಮೂರ್ತಿ ಆಚಾರ್ಯ ಆಗ್ರಹ
ಉಡುಪಿ: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿಯಾಗಿದೆ ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ ಸಿಇಟಿ ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲವಾಗಿದೆ. ಈ ಘಟನೆ ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿದೆ.
ಇದನ್ನೂ ಓದಿ:
ತಲಾತಲಾಂತದಿಂದ ನಡೆದು ಬಂದ ಸಂಪ್ರದಾಯದಂತೆ ಬ್ರಾಹ್ಮಣ ಗಂಡು ಮಕ್ಕಳು ಜನಿವಾರ ಧರಿಸುವುದು, ಬ್ರಾಹ್ಮಣರು ಸಹಿತ ಇತರೆಲ್ಲ ಹಿಂದೂ ಸಮುದಾಯದ ಹೆಣ್ಣು ಮಕ್ಕಳು ಹಣೆಗೆ ಕುಂಕುಮ ಅಥವಾ ಬಿಂದಿ ಧರಿಸುವುದು, ತಲೆಗೆ ಹೂ ಮುಡಿಯುವುದು, ಮೂಗುತಿ, ಕಿವಿಯೋಲೆ, ಕಾಲು ಗೆಜ್ಜೆ, ಬಳೆ ಧರಿಸುತ್ತಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದು ಸಮಸ್ತ ಹಿಂದೂ ಸಮುದಾಯದರು ತಲೆ ತಗ್ಗಿಸುವಂತಾಗಿದೆ. ಜನಿವಾರವು ಬ್ರಾಹ್ಮಣ ಸಮುದಾಯದ ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಗೌರವದ ಪ್ರತೀಕವಾಗಿದೆ. ಅದನ್ನು ಅವಮಾನಿಸುವ ಯಾವುದೇ ನಡೆ ಸಮಾಜ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:
