Featured

ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲ : ಕೃಷ್ಣಮೂರ್ತಿ ಆಚಾರ್ಯ ಖಂಡನೆ – vishwanews24

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ

ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿದೆ

ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷ್ಣಮೂರ್ತಿ ಆಚಾರ್ಯ ಆಗ್ರಹ

ಉಡುಪಿ: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿಯಾಗಿದೆ ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ ಸಿಇಟಿ ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲವಾಗಿದೆ. ಈ ಘಟನೆ ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿದೆ.

ಇದನ್ನೂ ಓದಿ:

ತಲಾತಲಾಂತದಿಂದ ನಡೆದು ಬಂದ ಸಂಪ್ರದಾಯದಂತೆ ಬ್ರಾಹ್ಮಣ ಗಂಡು ಮಕ್ಕಳು ಜನಿವಾರ ಧರಿಸುವುದು, ಬ್ರಾಹ್ಮಣರು ಸಹಿತ ಇತರೆಲ್ಲ ಹಿಂದೂ ಸಮುದಾಯದ ಹೆಣ್ಣು ಮಕ್ಕಳು ಹಣೆಗೆ ಕುಂಕುಮ ಅಥವಾ ಬಿಂದಿ ಧರಿಸುವುದು, ತಲೆಗೆ ಹೂ ಮುಡಿಯುವುದು, ಮೂಗುತಿ, ಕಿವಿಯೋಲೆ, ಕಾಲು ಗೆಜ್ಜೆ, ಬಳೆ ಧರಿಸುತ್ತಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದು ಸಮಸ್ತ ಹಿಂದೂ ಸಮುದಾಯದರು ತಲೆ ತಗ್ಗಿಸುವಂತಾಗಿದೆ.‌ ಜನಿವಾರವು ಬ್ರಾಹ್ಮಣ ಸಮುದಾಯದ ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಗೌರವದ ಪ್ರತೀಕವಾಗಿದೆ. ಅದನ್ನು ಅವಮಾನಿಸುವ ಯಾವುದೇ ನಡೆ ಸಮಾಜ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

18 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

18 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

18 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

18 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

23 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

23 hours ago