ಬೆಂಗಳೂರು : ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಶಾಲೆಗಳು ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್‌ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ದಾಖಲಾದಲ್ಲಿ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಆನ್‌ಲೈನ್ ಕ್ಲಾಸ್ ಬಂದ್ ಮಾಡುವಂತ ಶಾಲೆಗಳ ವಿರುದ್ದ ಕ್ರಮಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೂ ಸೂಚಿಸಿದ್ದಾರೆ. ಅಲ್ಲದೇ, ಹೈಕೋರ್ಟ್, ಸುಪ್ರೀಂ ಕೋರ್ಟ್‌ನ ಸೂಚನೆ ಕೂಡಾ ಇದೆ ಎಂದು ತಿಳಿಸಿದ್ದಾರೆ.
ಶಾಲಾ ಶುಲ್ಕ ಕಟ್ಟಿಲ್ಲವೆಂದು ಆನ್‌ಲೈನ್ ಕ್ಲಾಸ್ ಬಂದ್ ಮಾಡಿರುವ ವಿಚಾರದ ಬಗ್ಗೆ ಪೋಷಕರು ಕೂಡಾ ದೂರು ಸಲ್ಲಿಸಬಹುದು. ನನಗೆ ಅಥವಾ ಶಾಲಾ ವ್ಯಾಪ್ತಿಯ ಬಿಇಓ ಗಳಿಗೆ ದೂರು ನೀಡಿದ್ದಲ್ಲಿ, ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮಕೈಗೊಳ್ಳ ಲಾಗುತ್ತದೆ ಎಂದಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…