ವಿದ್ಯಾರ್ಥಿನಿಯ ಜೊತೆ ತರಗತಿಯಲ್ಲೇ ಲವ್ವಿ ಡವ್ವಿ : ಖಾಸಗಿ ಶಾಲಾ ಶಿಕ್ಷಕ ಬಂಧನ

Featured, ಉಡುಪಿ

ಕಾರ್ಕಳ, : ಕಾರ್ಕಳದ ಹೊಸ್ಮಾರು-ನಾರಾವಿ ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ರಾಸಲೀಲೆ ನಡೆಸಿದ ಶಿಕ್ಷಕನೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಪೆರಾಡಿ ಮೂಲದ ಮೂಲದ ಶಿಕ್ಷಕ ಪ್ರಸಾದ್ (28) ಬಂಧಿತ ಆರೋಪಿ.

ಆರೋಪಿ ಶಿಕ್ಷಕ ವಿದ್ಯಾರ್ಥಿಯೊಬ್ಬಳ ಜತೆ ತರಗತಿಯಲ್ಲೇ ರಾಸಲೀಲೆ ನಡೆಸಿದ್ದ. ಕಾಮುಕ ಶಿಕ್ಷಕನ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಲಗಳ ಪ್ರಕಾರ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ ಎನ್ನಲಾಗಿದೆ.

ಆದರೆ ರಾಸಲೀಲೆಯ ವೀಡಿಯೋ ಫೇಸ್ ಬುಕ್, ವಾಟ್ಸಾಪ್‌ನಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಯಾರೂ ಕೂಡ ಪೊಲೀಸರಿಗೆ ದೂರನ್ನು ನೀಡಿರಲಿಲ್ಲ. ಈ ಹಿನ್ನೆಲೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಈ ಕುರಿತು ಶಾಲಾ ಮುಖ್ಯಸ್ಥರು  ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಕಳ ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಹಾಲಾಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.