ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೊಬ್ಬರು ಪಕ್ಕೆಲುಬು ಎಂಬ ಪದವನ್ನು ಉಚ್ಚರಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿಕೊಡುತ್ತಿರುವ ಮತ್ತು ಆ ಪದವನ್ನು ಸರಿಯಾಗಿ ಉಚ್ಚರಿಸಲಾಗದ ವಿದ್ಯಾರ್ಥಿ ಕಷ್ಟಪಡುತ್ತಿರುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಪಕ್ಕೆಲುಬು ಪದ ಸರಿಯಾಗಿ ಉಚ್ಚರಿಸಲಾಗದೇ ವಿದ್ಯಾರ್ಥಿ ಪದೇ ಪದೇ ಅದೇ ಪದವನ್ನು ಹೇಳುವಂತೆ ಒತ್ತಾಯಿಸುತ್ತಾ ಶಿಕ್ಷಕ ಕಪಾಳಕ್ಕೆ ಹೊಡೆದಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಸಚಿವರು ಗುರುವಾರ ಆದೇಶ ಹೊರಡಿಸಿದ್ದು, ಯಾವ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂಬುದನ್ನು ತಿಳಿಯುವುದಕ್ಕಾಗಿ ಸೈಬರ್ ಕ್ರೈಂ ಠಾಣೆ ದೂರು ನೀಡಿದ್ದು, ಸಂಬಂಧಪಟ್ಟ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಪತ್ರ ಬರೆಯಲಾಗಿತ್ತು
ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ನಿರಂತರ ಕಲಿಕೆಯ ನಂತರ ಆ ಪದದ ಬಗ್ಗೆ ಸ್ಪಷ್ಟತೆ ಸಿಕ್ಕಾಗ ಸರಿಯಾದ ಉಚ್ಚಾರ ಮಾಡುವುದು ಸಾಧ್ಯವಾಗಲಿದೆ. ಶಿಕ್ಷಕರಾದವರು ಮಕ್ಕಳಿಗೆ ಸರಿಯಾದ ಉಚ್ಚಾರ ಮಾಡಿಸಬೇಕೇ ವಿನಃ ಅದನ್ನೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಕೂಡ ಅಪರಾಧವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…