ವಿದ್ಯಾರ್ಥಿಯೊಬ್ಬನ ಪಕ್ಕೆಲುಬು ತಪ್ಪು ಉಚ್ಚರಣೆ : ಶಿಕ್ಷಣ ಸಚಿವರಿಂದ ತನಿಖೆಗೆ ಆಗ್ರಹ -Vishwanews24

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೊಬ್ಬರು ಪಕ್ಕೆಲುಬು ಎಂಬ ಪದವನ್ನು ಉಚ್ಚರಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿಕೊಡುತ್ತಿರುವ ಮತ್ತು ಆ ಪದವನ್ನು ಸರಿಯಾಗಿ ಉಚ್ಚರಿಸಲಾಗದ ವಿದ್ಯಾರ್ಥಿ ಕಷ್ಟಪಡುತ್ತಿರುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಪಕ್ಕೆಲುಬು ಪದ ಸರಿಯಾಗಿ ಉಚ್ಚರಿಸಲಾಗದೇ ವಿದ್ಯಾರ್ಥಿ ಪದೇ ಪದೇ ಅದೇ ಪದವನ್ನು ಹೇಳುವಂತೆ ಒತ್ತಾಯಿಸುತ್ತಾ ಶಿಕ್ಷಕ ಕಪಾಳಕ್ಕೆ ಹೊಡೆದಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಸಚಿವರು ಗುರುವಾರ ಆದೇಶ ಹೊರಡಿಸಿದ್ದು, ಯಾವ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂಬುದನ್ನು ತಿಳಿಯುವುದಕ್ಕಾಗಿ ಸೈಬರ್ ಕ್ರೈಂ ಠಾಣೆ ದೂರು ನೀಡಿದ್ದು, ಸಂಬಂಧಪಟ್ಟ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಪತ್ರ ಬರೆಯಲಾಗಿತ್ತು

ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ನಿರಂತರ ಕಲಿಕೆಯ ನಂತರ ಆ ಪದದ ಬಗ್ಗೆ ಸ್ಪಷ್ಟತೆ ಸಿಕ್ಕಾಗ ಸರಿಯಾದ ಉಚ್ಚಾರ ಮಾಡುವುದು ಸಾಧ್ಯವಾಗಲಿದೆ. ಶಿಕ್ಷಕರಾದವರು ಮಕ್ಕಳಿಗೆ ಸರಿಯಾದ ಉಚ್ಚಾರ ಮಾಡಿಸಬೇಕೇ ವಿನಃ ಅದನ್ನೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಕೂಡ ಅಪರಾಧವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago