Featured

ವಿದ್ಯಾವಂತ ಯುವಕರಿಗೆ ಅವಕಾಶ  : ಕರ್ನಾಟಕ ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲಿ ಇದು ದೊಡ್ಡ ಬದಲಾವಣೆ : ಡಿ.ಕೆ. ಶಿವಕುಮಾರ್ – Vishwanews24

17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮ- ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ : ಡಿ.ಕೆ. ಶಿವಕುಮಾರ್

ನವದೆಹಲಿ: “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯಲ್ಲಿ ಬುಧವಾರ ನಡೆದ ಸಿಇಸಿ ಸಭೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಅಂತಿಮ ನಾಲ್ಕು ಕ್ಷೇತ್ರಗಳಲ್ಲಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ನಾಳೆ ಈ ಕ್ಷೇತ್ರಗಳ ಸ್ಥಳೀಯ ನಾಯಕರ ಸಭೆ ಕರೆಯಲಾಗಿದೆ. ನಂತರ ನಾಡಿದ್ದು ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ಕೋಲಾರ ನಾಯಕರ ಭೇಟಿ ಬಗ್ಗೆ ಕೇಳಿದಾಗ, “ರಾಜಕೀಯವಾಗಿ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಪಕ್ಷ ಹೇಳಿದಂತೆ ಎಲ್ಲರೂ ಕೇಳುತ್ತಾರೆ” ಎಂದು ತಿಳಿಸಿದರು.

ಬಾಗಲಕೋಟೆ ಟಿಕೆಟ್ ಸಿಗದ ಕಾರಣ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿರುವ ಬಗ್ಗೆ ಕೇಳಿದಾಗ, “ಉಸ್ತುವಾರಿ ಸಚಿವರುಗಳು ಯಾರ ಹೆಸರನ್ನು ಸಲಹೆ ನೀಡಿದ್ದರೋ ಅವರ ಎಲ್ಲಾ ಹೆಸರುಗಳು ಸಿಇಸಿ ಸಭೆಯಲ್ಲಿ ಚರ್ಚೆ ಆಗಿದೆ” ಎಂದು ತಿಳಿಸಿದರು.

50% ಟಿಕೆಟ್ ಯುವಕರಿಗೆ ನೀಡಿದ್ದೇವೆ:

ಸಚಿವರ ಕುಟುಂಬದವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಕೇಳಿದಾಗ, “ರಾಜಕೀಯ ವ್ಯವಸ್ಥೆಯಲ್ಲಿ ಕೆಲಸ ಮಾಡಿರುವವರಿಗೂ ಹೊಸ ಅಭ್ಯರ್ಥಿಗಳನ್ನು ತರುವುದಕ್ಕೂ ವ್ಯತ್ಯಾಸವಿದೆ. ಇಡೀ ದೇಶದಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇನ್ನು 50% ಯುವಕರಿಗೆ ಅವಕಾಶ ನೀಡಿದ್ದೇವೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಇತಿಹಾಸದಲ್ಲಿ ಇದು ದೊಡ್ಡ ಬದಲಾವಣೆ. ನಾವು ವಿದ್ಯಾವಂತ ಯುವಕರಿಗೆ ಅವಕಾಶ ನೀಡಿದ್ದೇವೆ. ಎಲ್ಲರೂ ಸಮರ್ಥರಿದ್ದು, ಎಲ್ಲರ ಮೇಲೂ ಹೊಣೆಗಾರಿಕೆ ಇದೆ” ಎಂದು ತಿಳಿಸಿದರು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago