ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯಯರ ನಿಧನಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತಪಡಿಸಿದರು.

Featured, ಉಡುಪಿ

ಉಡುಪಿ: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿ ಜಿಲ್ಲೆಯ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯಯರ ನಿಧನಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತಪಡಿಸಿದರು.

ನಾಡಿನ ಹಿರಿಯ ವಿದ್ವಾಂಸರಾದ ಪದ್ಮಶ್ರೀ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನದ ವಿಷಯ ಕೇಳಿ ಬೇಸರವಾಯಿತು. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು, ಅಸಂಖ್ಯಾತ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್  ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಬಾಣಭಟ್ಟನ ಕಾದಂಬರಿ, ಮಹಾಶ್ವೇತನ ಸಂಸ್ಕೃತ ಕತೆಗಳು, ಸಂಸ್ಕೃತ ಕಾವ್ಯಗಳು, ಕಾಳಿದಾಸನ ಶಾಕುಂತಲ, ಶೂದ್ರಕನ ಮೃಚ್ಛಕಟಿಕಾ ಮುಂತಾದ ಕೃತಿಗಳನ್ನು ಗೋವಿಂದಾಚಾರ್ಯರು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಸಿನಿಮಾಗಳಿಗೆ ಗೋವಿಂದಾಚಾರ್ಯರು ಸಂಭಾಷಣೆಯನ್ನೂ ಬರೆದಿದ್ದಾರೆ.

ವರದಿ: ಸಾಲಿಯಾನ್ ಮೂಳೂರು