ಉಡುಪಿ: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿ ಜಿಲ್ಲೆಯ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯಯರ ನಿಧನಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತಪಡಿಸಿದರು.
ನಾಡಿನ ಹಿರಿಯ ವಿದ್ವಾಂಸರಾದ ಪದ್ಮಶ್ರೀ ಡಾ. ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನದ ವಿಷಯ ಕೇಳಿ ಬೇಸರವಾಯಿತು. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು, ಅಸಂಖ್ಯಾತ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಬಾಣಭಟ್ಟನ ಕಾದಂಬರಿ, ಮಹಾಶ್ವೇತನ ಸಂಸ್ಕೃತ ಕತೆಗಳು, ಸಂಸ್ಕೃತ ಕಾವ್ಯಗಳು, ಕಾಳಿದಾಸನ ಶಾಕುಂತಲ, ಶೂದ್ರಕನ ಮೃಚ್ಛಕಟಿಕಾ ಮುಂತಾದ ಕೃತಿಗಳನ್ನು ಗೋವಿಂದಾಚಾರ್ಯರು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಸಿನಿಮಾಗಳಿಗೆ ಗೋವಿಂದಾಚಾರ್ಯರು ಸಂಭಾಷಣೆಯನ್ನೂ ಬರೆದಿದ್ದಾರೆ.
ವರದಿ: ಸಾಲಿಯಾನ್ ಮೂಳೂರು
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…
ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…