Featured

ವಿದ್ಯುತ್ ಕಂಬಕ್ಕೆ ಬೈಕ್  ಡಿಕ್ಕಿ  : ಯುವತಿ ಸಾವು ; ಯುವಕ ಗಂಭೀರ – vishwanews24

ವಿದ್ಯುತ್ ಕಂಬಕ್ಕೆ ಬೈಕ್  ಡಿಕ್ಕಿ  : ಯುವತಿ ಸಾವು ; ಯುವಕ ಗಂಭೀರ

ದಾವಣಗೆರೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್  ಡಿಕ್ಕಿಯಾದ  ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ  ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.

ಮೃತ ಯುವತಿಯನ್ನು ಪ್ರಿಯಾ (21) ಹಾಗೂ ಗಾಯಗೊಂಡ ಯುವಕನನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಇಬ್ಬರು ದಾವಣಗೆರೆ ನಿವಾಸಿಗಳಾಗಿದ್ದು, ಕಾಲೇಜು ಮುಗಿಸಿ ಡಾಬಾವೊಂದಕ್ಕೆ ಸ್ನೇಹಿತರ ಜೊತೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿ ವಾಪಸ್ಸಾಗುವ ವೇಳೆ ಈ ಅಪಘಾತ ನಡೆದಿದೆ.

ಅಪಘಾತಕ್ಕೂ ಮುನ್ನ ಇಬ್ಬರ ನಡುವೆ ಜಗಳ
ಪ್ರಿಯಾ ಹಾಗೂ ಯೋಗೇಶ್ ನಡುವೆ ಡಾಬಾದಲ್ಲೇ ಗಲಾಟೆ ನಡೆದಿತ್ತು. ಇನ್ನೂ ಇಬ್ಬರ ಜಗಳ ಸಿಸಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿದೆ. ಜಗಳವಾಡಿ ಪ್ರಿಯಾ ಹಾಗೂ ಆಕೆಯ ಸ್ನೇಹಿತೆ ಒಂದು ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ, ಬುಲೆಟ್ ಬೈಕ್‌ನಲ್ಲಿ ಯುವತಿಯರನ್ನು ಹಿಂಬಾಲಿಸಿ ಹೊರಟ ಯೋಗೇಶ್, ನಡು ರಸ್ತೆಯಲ್ಲಿ ನಿಲ್ಲಿಸಿ ಪ್ರಿಯಾಳನ್ನು ತನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಬಂದಿದ್ದ. ಆಗಲೂ ಜಗಳವಾಡುತ್ತಾ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿದ್ದು, ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ವಿರುದ್ಧ ಯುವತಿ ಕುಟುಂಬಸ್ಥರು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago